ಕೋಲಾರ : ತಮ್ಮನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಕುಟುಂಬಸ್ಥರಿಗೆಲ್ಲ ಸೋಂಕು ತಗುಲಿರಬಹುದು ಎಂದು ಹೆದರಿ ಸೋಂಕಿತನ ಅಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಾಗರಾಜ್ (37) ಮನೆಯಲ್ಲಿ ನೇಣಿಗೆ ಶರಣಾಗಿರುವ ವ್ಯಕ್ತಿ.
30 ವರ್ಷದ ತಮ್ಮನಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಆತನನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ನಾಗರಾಜ್ ಗೆ ಈ ವಿಚಾರ ತಿಳಿದಿದೆ. ತಮ್ಮನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರಿಂದ ತನಗೆ ಹಾಗೂ ಕುಟುಂಬಸ್ಥರಿಗೂ ಕೊರೊನಾ ತಗಲಿರಬಹುದು ಎಂಬ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.








