ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

admin by admin
August 21, 2026
in Newsbeat, State, ರಾಜ್ಯ
adb-1750-crore-grant-for-500-karnataka-public-schools-development-kannada

adb-1750-crore-grant-for-500-karnataka-public-schools-development-kannada

Share on FacebookShare on TwitterShare on WhatsappShare on Telegram

 

ಬೆಂಗಳೂರು – ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವು ಘೋಷಿಸಿರುವ ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ʼ (ADB) ಮತ್ತು ರಾಜ್ಯ ಸರ್ಕಾರ ಇಂದು ಈ ಸಂಬಂಧದ ಮಹತ್ವದ ಒಪ್ಪಂದಕ್ಕೆ ಸಹಿ ಮಾಡಿವೆ.

Related posts

dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

August 21, 2026
reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

August 21, 2026

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಶ್ರೀ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಡಿಬಿ ಬ್ಯಾಂಕಿನ ಅಧಿಕಾರಿಗಳು ಈ ಒಪ್ಪಂದಕ್ಕೆ ಸಹಿ ಹಾಕಿದರು. ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಅಂದರೆ 2029-30ನೇ ಸಾಲಿನ ಒಳಗೆ ರಾಜ್ಯ ಸರ್ಕಾರವು 2,500 ಕೋಟಿ ರೂ. ವಿನಿಯೋಗಿಸಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕೆ ಎಡಿಬಿ ಬ್ಯಾಂಕ್ 1,750 ಕೋಟಿ ರೂ.ಗಳ ನೆರವು ನೀಡಲಿದೆ.

ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಸಾಮರ್ಥ್ಯ ಹೊಂದಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಪ್ರತಿ ಶಾಲೆಯಲ್ಲೂ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ಎಡಿಬಿಯ ನೆರವಿನಿಂದ ಒಟ್ಟು 500 ಕೆಪಿಎಸ್ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಅಧಿಕಾರಿಗಳು ಈ ಒಪ್ಪಂದಕ್ಕೆ ಸಹಿ ಹಾಕಿದ ಸಂದರ್ಭದಲ್ಲಿ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿ ಮಾನ್ಯ ಡಾ. ಜಿ. ಪರಮೇಶ್ವರ, ಏಷ್ಯನ್ ಅಭಿವೃದ್ಧಿ ಬ್ಯಾಂಕ್ನ ಕಂಟ್ರಿ ಡೈರೆಕ್ಟರ್ ಮಿಯೋ ಓಕಾ, ಎಡಿಬಿಯ ಪ್ರಿನ್ಸಿಪಲ್ ಪೋರ್ಟ್ಫೋಲಿಯೊ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್ ಕೈ ವೇಯ್ ಯಿಯೋ, ಎಡಿಬಿ ಬ್ಯಾಂಕಿನ ಹಿರಿಯ ಪ್ರಾಜೆಕ್ಟ್ ಆಫೀಸರ್ (ಶಿಕ್ಷಣ) ಶ್ರೀಮತಿ ಪೂನಂ ಎಸ್. ಭಾಂಬ್ರಿ, ಎಡಿಬಿಯ ಪ್ರಿನ್ಸಿಪಲ್ ಕಮ್ಯುನಿಕೇಷನ್ಸ್ ಆಫೀಸರ್ ಶ್ರೀ ರಾಜೇಶ್ ಕುಮಾರ್ ಡಿಯೋಲ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಪೂರ್ಣಿಮಾ ಪ್ರಸಾದ್ಮಾನ್ಯ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಶ್ರೀ ಎಲ್.ಕೆ. ಅತೀಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ವಿ. ಮಹೇಶ್, ಆರ್ಥಿಕ ವ್ಯವಹಾರಗಳ ಇಲಾಖೆ ಉಪಕಾರ್ಯದರ್ಶಿ ಸೌರಭ್ ಸಿಂಗ್, ಎಡಿಬಿ ಬ್ಯಾಂಕಿನ ಮತ್ತು ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಮುಂದಿನ 4 ವರ್ಷಗಳಲ್ಲಿ ಅನುಷ್ಠಾನ

“ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಅಂದರೆ 2029-30ನೇ ಸಾಲಿನ ಒಳಗೆ ರಾಜ್ಯ ಸರ್ಕಾರವು 2,500 ಕೋಟಿ ರೂ. ವಿನಿಯೋಗಿಸಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕೆ ಎಡಿಬಿ ಬ್ಯಾಂಕ್ 1,750 ರೂ.ಗಳ ನೆರವು ಒದಗಿಸಲಿದೆ. ಉಳಿದ 750 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆ. ಈ ಒಪ್ಪಂದಕ್ಕೆ ಸಹಿ ಮಾಡುವುದಕ್ಕೂ ಮೊದಲೇ ನಾನು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಒಪ್ಪಂದವನ್ನು ಅಂತಿಮಗೊಳಿಸಿದ್ದೇನೆ” ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

“ಎಡಿಬಿ ಬ್ಯಾಂಕ್ ಭಾರತದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಇಷ್ಟೊಂದು ದೊಡ್ಡ ಮೊತ್ತದ ಆರ್ಥಿಕ ನೆರವು ನೀಡುತ್ತಿರುವುದು ಇದೇ ಮೊದಲು. ಅವರು ಈ ನೆರವು ಪ್ರಕಟಿಸುವುದಕ್ಕೂ ಮೊದಲೇ ನಮ್ಮ ಕೆಪಿಎಸ್ ಶಾಲೆಗಳ ಯೋಜನೆ, ಕಾರ್ಯಗತಗೊಳಿಸಲು ನಾವು ತೆಗೆದುಕೊಂಡಿರುವ ಕ್ರಮ, ನಮ್ಮ ಬದ್ಧತೆ ಪರಿಶೀಲಿಸಿದ್ದಾರೆ. ಅಲ್ಲದೆ, ನಾವು ಗುಣಮಟ್ಟದ ಶಿಕ್ಷಣ ನೀಡಲು ತೆಗೆದುಕೊಂಡಿರುವ ಕ್ರಮ ಬ್ಯಾಂಕಿನ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಿದೆ” ಎಂದು ಸಚಿವರು ವಿವರಿಸಿದ್ದಾರೆ.

“ದ್ವಿಭಾಷಾ ಶಿಕ್ಷಣ, ಮಕ್ಕಳ ಹಾಜರಾತಿ ದಾಖಲಿಸಲು ʻನಿರಂತರʼ ಯೋಜನೆ ಜಾರಿ, ಬೃಹತ್ ಪ್ರಮಾಣದಲ್ಲಿ ಅಂದರೆ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿರುವುದು, ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ನಿರಂತರವಾಗಿ ನೀಡುತ್ತಿರುವ ತರಬೇತಿ, ಕಂಪ್ಯೂಟರ್ ಶಿಕ್ಷಣ ನೀಡಲು ವಿಶೇಷವಾಗಿ ಕಂಪ್ಯೂಟರ್ ಸೈನ್ಸ್ ಶಿಕ್ಷಕರ ನೇಮಕ, ಎಐ ಕಲಿಸಲು ನಾವು ನಡೆಸಿರುವ ಸಿದ್ಧತೆ, ವೃತ್ತಿ ಮತ್ತು ಕೌಶಲ ಶಿಕ್ಷಣ, ಗ್ರಾಮೀಣ ಮಕ್ಕಳಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಮ್ಮ ಯೋಜನೆ ಎಲ್ಲವೂ ಈ ಮಹತ್ವದ ಒಪ್ಪಂದ ಏರ್ಪಡಲು ಕಾರಣವಾಗಿದೆ” ಎಂದು ಸಚಿವರು ಹೇಳಿದ್ದಾರೆ.

“ಈಗಾಗಲೇ ನಾವು 100 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿಪಡಿಸಲು ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ್ದೇವೆ. ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸುವ ಶಾಲೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದ ಸಚಿವರು, ಸ್ಪಷ್ಟ ಮಾನದಂಡಗಳನ್ನು ಇಟ್ಟುಕೊಂಡು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ” ಎಂದಿದ್ದಾರೆ.

“ಈಗಾಗಲೇ ಶೇ.15 ರಷ್ಟು ಅಂದರೆ 262.5 ಕೋಟಿ ರೂ.ಗಳನ್ನು ಎಡಿಬಿ ಬ್ಯಾಂಕ್ ನೆರವು ನೀಡಿದೆ. 2026-27 ನೇ ಸಾಲಿನಲ್ಲಿ ಶೇ. 20.5 358.75 ಕೋಟಿ ನೆರವು ನೀಡಲಿದೆ. 2027-28 ನೇ ಸಾಲಿನಲ್ಲಿ ಶೇ.22 ರಷ್ಟು ಎಂದರೆ 385 ಕೋಟಿ ರೂ. ಹಾಗೂ 2028-29 ಸಾಲಿನಲ್ಲಿ ಶೇ. 21.5 ರಷ್ಟು ಎಂದರೆ 376.25 ಕೋಟಿ ರೂ. ಮತ್ತು 2029-30 ನೇ ಸಾಲಿನಲ್ಲಿ ಶೇ. 21 ರಷ್ಟು ಎಂದರೆ 367.5 ಕೋಟಿ ರೂ. ನೆರವು ನೀಡಲಿದೆ” ಎಂದು ಸಚಿವರು ವಿವರಿಸಿದ್ದಾರೆ.

Tags: #KPS #KarnatakaPublicSchools #ADB #MadhuBangarappa #KarnatakaEducation #SchoolInfrastructure #BengaluruNews #KarnatakaGovt #EducationNewsKannada #KannadaNews #saakshatv
ShareTweetSendShare
Join us on:

Related Posts

dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

by admin
August 21, 2026
0

ರಾಜ್ಯದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಯೋಜನೆಗಳ ಚುರುಕಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ (HUDCO) ಸಂಸ್ಥೆಯ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram