ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

5 ಸಾವಿರಕ್ಕೂ ಹೆಚ್ಚು ಜನರಿಗೆ ತಪಾಸಣೆ; ಶೀಘ್ರದಲ್ಲೇ ಮೇಲುಕೋಟೆಯ ವಿವಿಧ ಗ್ರಾಮಗಳಿಗೂ ಶಿಬಿರ ವಿಸ್ತರಣೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

admin by admin
August 26, 2026
in Uncategorized
Darshan Puttannaiah Mega Health Camp, Nagamangala Dudda Health Camp, Mandya MIMS Kidwai Free Checkup, Melukote Assembly Health Initiatives, Mandya District Administration Health Drive

Darshan Puttannaiah Mega Health Camp, Nagamangala Dudda Health Camp, Mandya MIMS Kidwai Free Checkup, Melukote Assembly Health Initiatives, Mandya District Administration Health Drive

Share on FacebookShare on TwitterShare on WhatsappShare on Telegram

ಮಂಡ್ಯ: ನಾಗಮಂಗಲ ತಾಲೂಕಿನ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಕಿದ್ವಾಯಿ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿತ್ತು.

Related posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

August 26, 2026
saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

August 26, 2026

ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಿಬಿರಕ್ಕೆ ಚಾಲನೆ ನೀಡಿ, ಗ್ರಾಮೀಣ ಭಾಗದ ಜನರು ಇಂತಹ ಉಚಿತ ಆರೋಗ್ಯ ಸೇವೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ರೀತಿಯ ಆರೋಗ್ಯ ತಪಾಸಣಾ ಶಿಬಿರಗಳನ್ನು ಶೀಘ್ರದಲ್ಲೇ ಮೇಲುಕೋಟೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲೂ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು.

ಶಿಬಿರದಲ್ಲಿ 250ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಹೃದಯ, ನರ, ಮೂತ್ರಪಿಂಡ, ಮಧುಮೇಹ, ಕ್ಯಾನ್ಸರ್, ಸ್ತ್ರೀರೋಗ, ಕೀಲುಮೂಳೆ, ಕಣ್ಣು, ಕಿವಿ-ಮೂಗು-ಗಂಟಲು ಹಾಗೂ ದಂತ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ ನಡೆಸಲಾಯಿತು. ಈಗಾಗಲೇ 2 ಸಾವಿರಕ್ಕೂ ಅಧಿಕ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗಿದೆ.

ಜನರ ಅನುಕೂಲಕ್ಕಾಗಿ ಪ್ರತಿ ಪಂಚಾಯಿತಿಯಿಂದಲೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಶಸ್ತ್ರಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ಗುರುತಿಸಿ, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಕಿದ್ವಾಯಿ ಹಾಗೂ ಮಿಮ್ಸ್ ಸಹಯೋಗದಲ್ಲಿ ಮುಂದಿನ ಚಿಕಿತ್ಸೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಶಿಬಿರಕ್ಕೆ ಆಗಮಿಸಿದವರಿಗೆ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.

ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಮಾತನಾಡಿ, ತೀವ್ರ ಕಾಯಿಲೆಗಳಿಂದ ಬಳಲುತ್ತಿರುವ ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ, ಅವರಿಗೆ ಅಗತ್ಯವಾದ ಹೆಚ್ಚಿನ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಶಿಬಿರದ ಯಶಸ್ಸಿಗೆ ಸಹಕರಿಸಿದ ಆದಿಚುಂಚನಗಿರಿ ಮಠದ ಶ್ರೀಗಳು, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೃತಜ್ಞತೆ ಸಲ್ಲಿಸಿದರು.

Tags: #DarshanPuttannaiah #MandyaNews #HealthCamp #Melukote #Nagamangala #KannadaNews #SaakshaTV
ShareTweetSendShare
Join us on:

Related Posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

by admin
August 26, 2026
0

ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್‌ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

by admin
August 26, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ...

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

by admin
August 26, 2026
0

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್...

ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನಾ ಸಮಾರಂಭ

ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನಾ ಸಮಾರಂಭ

by admin
August 25, 2026
0

ಮಂಡ್ಯ: ಎಲೆಕೆರೆಯ ಪಿ.ಎಂ. ಶ್ರೀ ಆದರ್ಶ ವಿದ್ಯಾಲಯದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಸಹಯೋಗದೊಂದಿಗೆ 'ತಾರಾ ಇಂಗ್ಲಿಷ್ ಭಾಷಾ...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram