ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠ ನಡೆಸಿತು.
ತಮಿಳುನಾಡಿನಿಂದ ಮತ್ತೆ ಮನವಿ
ಕರ್ನಾಟಕದಿಂದ ಕಾವೇರಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ.ಈ ಸಂದರ್ಭದಲ್ಲಿ ಕಾವೇರಿ ಜಲಾನಯನ ಪ್ರದೇಶದ ಮಳೆ ಪ್ರಮಾಣ, ಜಲಾಶಯಗಳಲ್ಲಿನ ನೀರಿನ ಸಂಗ್ರಹ ಹಾಗೂ ನೀರು ಹರಿವಿನ ಕುರಿತು ನಿಯಮಿತವಾಗಿ ನವೀಕರಿಸಿದ ಮಾಹಿತಿಯನ್ನು ಪಡೆದು ಪರಿಸ್ಥಿತಿಯನ್ನು ಪರಿಶೀಲಿಸುವ ಅಗತ್ಯವಿದೆ ಎಂದು ನ್ಯಾಯಾಲಯ ಸೂಚಿಸಿದೆ.
ಅದರಂತೆ ಪ್ರತಿ 15 ದಿನಗಳಿಗೊಮ್ಮೆ CWRC ಸಭೆ ನಡೆಸಿ, ಪರಿಷ್ಕೃತ ಮಾಹಿತಿಯ ಆಧಾರದ ಮೇಲೆ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಬಿಕ್ಕಟ್ಟು ತೀವ್ರವಾಗಿರುವ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್‌ನ ಈ ಸೂಚನೆ ಮಹತ್ವ ಪಡೆದುಕೊಂಡಿದೆ.








