ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

Shwetha by Shwetha
September 2, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಹಗರಣದಲ್ಲಿ ಸಿಕ್ಕಿಬಿದ್ದಿರುವ ಮಧ್ಯವರ್ತಿಗಳಿಂದ ಹಿಡಿದು ಹಗರಣದ ನಂಟಿರುವವರೆಲ್ಲರೂ ಬಿಜೆಪಿ ಪಕ್ಷಕ್ಕೆ ಸೇರಿದವರೇ ಆಗಿದ್ದಾರೆ. ಮೊದಲು ಬಿಜೆಪಿ ನಾಯಕರು ತಮ್ಮ ಪಕ್ಷದ ಅಕ್ರಮಗಳ ಬಗ್ಗೆ ಜನರಿಗೆ ತಿಳಿಸಲು ಪಾದಯಾತ್ರೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.

ಯುವಕರ ಭವಿಷ್ಯದ ಜೊತೆ ಬಿಜೆಪಿ ಚೆಲ್ಲಾಟ

Related posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

September 2, 2026
ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

September 2, 2026

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಕೇವಲ ಹಣದ ಆಸೆಗಾಗಿ ರಾಜ್ಯದ ಲಕ್ಷಾಂತರ ಯುವಕರ ಭವಿಷ್ಯವನ್ನು ಮಾರಾಟಕ್ಕಿಟ್ಟಿದ್ದಾರೆ. ಕೆಪಿಎಸ್ ಸಿ ಅಧ್ಯಕ್ಷರು, ಸದಸ್ಯರು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಮಧ್ಯವರ್ತಿಗಳು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರೇ ಆಗಿದ್ದಾರೆ. ಇಷ್ಟೆಲ್ಲಾ ಪುರಾವೆಗಳಿದ್ದರೂ ಬಿಜೆಪಿ ನಾಯಕರು ಈ ಬಗ್ಗೆ ಯಾಕೆ ಮೌನವಾಗಿದ್ದಾರೆ? ತಮ್ಮ ಪಕ್ಷದವರೇ ಆದ ಅಕ್ರಮಕೋರರನ್ನು ಯಾಕೆ ರಕ್ಷಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಗೆ ದಾಖಲೆ ನೀಡಲು ನೇರ ಸವಾಲು

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಖರ್ಗೆ, ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೇವಲ ಹಿಟ್ ಆಂಡ್ ರನ್ ರಾಜಕಾರಣ ಮಾಡುವುದು ಸರಿಯಲ್ಲ. ಪರೀಕ್ಷೆ ನಡೆಸುವುದು ಕೆಪಿಎಸ್ ಸಿಯ ಸ್ವತಂತ್ರ ಜವಾಬ್ದಾರಿಯಾಗಿದ್ದು, ಇದರಲ್ಲಿ ನನ್ನ ಪಾತ್ರವಿಲ್ಲ. ಒಂದು ವೇಳೆ ನನ್ನ ಮೇಲಿನ ಆರೋಪಕ್ಕೆ ಒಂದೇ ಒಂದು ಅಧಿಕೃತ ದಾಖಲೆ ನೀಡಿದರೂ ನಾನು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧನಿದ್ದೇನೆ ಎಂದು ಗುಡುಗಿದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೇವಲ ಆರ್ ಎಸ್ ಎಸ್ ನಾಯಕರನ್ನು ಮೆಚ್ಚಿಸಲು ನನ್ನ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಸದನದಿಂದ ಓಡಿಹೋದ ವಿಪಕ್ಷಗಳು

ವಿಧಾನಸಭೆ ಅಧಿವೇಶನದಲ್ಲಿ ಬರಗಾಲ ಮತ್ತು ನಾಗೇಂದ್ರ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಿದಾಗ ವಿರೋಧ ಪಕ್ಷದವರು ಭಾಗವಹಿಸದೆ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಕಾರಣಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐನ ಹಸ್ತಕ್ಷೇಪ ಮತ್ತು ನಡೆ ಎಂತಹುದು ಎನ್ನುವುದು ಎಲ್ಲರಿಗೂ ತಿಳಿದಿದೆ. ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸಲು ಸಿಎಂ ಮತ್ತು ಡಿಸಿಎಂ ಈಗಾಗಲೇ ದೆಹಲಿಗೆ ತೆರಳಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ShareTweetSendShare
Join us on:

Related Posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

by Shwetha
September 2, 2026
0

ತಮಿಳುನಾಡಿನ ರಾಜಕಾರಣದಲ್ಲಿ ಟಿವಿಕೆ ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಟಿವಿಕೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ವಿಜಯ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ನಿರ್ಧಾರ ಕೈಗೊಂಡರೆ,...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

by Shwetha
September 2, 2026
0

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

by Shwetha
September 2, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದೆಯೇ? ಹೌದು ಎನ್ನುತ್ತಿವೆ ಶಿಡ್ಲಘಟ್ಟದ ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಅವರ ಮಾತುಗಳು. ಸೆಪ್ಟೆಂಬರ್ 12ರಂದು...

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

by Shwetha
September 2, 2026
0

ಜಾಗತಿಕ ಅನಿಶ್ಚಿತತೆ, ಯುದ್ಧಗಳು ಹಾಗೂ ಪೂರೈಕೆ ಸರಪಳಿಯಲ್ಲಿನ ಅಡಚಣೆಗಳ ನಡುವೆಯೂ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ದೇಶವು 7.8% ಆರ್ಥಿಕ ಬೆಳವಣಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram