ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು – ಡಿ.ಕೆ. ಶಿವಕುಮಾರ್

admin by admin
September 1, 2026
in Newsbeat, State, ರಾಜ್ಯ
dk-shivakumar-gadag-drought-review-public-service-gram-panchayat-panch-garanti

dk-shivakumar-gadag-drought-review-public-service-gram-panchayat-panch-garanti

Share on FacebookShare on TwitterShare on WhatsappShare on Telegram

ಗದಗ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು, ಜನರಿಗೆ ಲಭ್ಯವಾಗಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಸೂಚಿಸಿದರು.

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕಿನಲ್ಲೇ ಇರಬೇಕು ಎಂದು ಹೇಳಿದರು.

Related posts

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

September 1, 2026
gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

September 1, 2026

ಸೆ.5ರಂದು ಪ್ರಜಾಸೇವೆ ಇಲಾಖೆ ಪ್ರಾರಂಭಿಸಲಾಗುತ್ತಿದೆ. ಜನರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹರಿಸುವ ವ್ಯವಸ್ಥೆ ರೂಪಿಸಬೇಕು. ಜಿಲ್ಲಾ ಸಚಿವರು ತಿಂಗಳಿಗೆ ಎರಡು ದಿನ ಸಭೆ ನಡೆಸಲಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಸಭೆಯಲ್ಲಿ ಸಾಧ್ಯವಾದಷ್ಟು ಹೆಚ್ಚಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.

ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆ ಆಲಿಸಿ

ಶಾಸಕರು ತಿಂಗಳಿಗೆ ಕನಿಷ್ಠ ನಾಲ್ಕು ದಿನ ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಶಾಸಕರು ಜನರ ಬಳಿಗೆ ತೆರಳಲು ಸಾಧ್ಯವಾಗದ ಸಂದರ್ಭದಲ್ಲಿ ಅಧಿಕಾರಿಗಳೇ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕು ಎಂದು ಡಿ.ಕೆ. ಶಿವಕುಮಾರ್ ಸೂಚಿಸಿದರು.

ನಿವೇಶನ ರಹಿತರಿಗೆ ವಿಶೇಷ ಕಾರ್ಯಕ್ರಮ

ಸರ್ಕಾರವು ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ನಿವೇಶನಕ್ಕಾಗಿ ಅರ್ಜಿ ಸಲ್ಲಿಸುವವರು ಸೂಕ್ತ ದಾಖಲೆಗಳನ್ನು ಕಡ್ಡಾಯವಾಗಿ ನೀಡಬೇಕು. ಈಗಾಗಲೇ ನಿವೇಶನ ಹೊಂದಿರುವವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಶೀಲನೆ

ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲನೆ ಮಾಡಬೇಕು. ಫಲಾನುಭವಿಗಳ ಸ್ವಂತ ದೂರವಾಣಿ ಸಂಖ್ಯೆಯನ್ನೇ ದಾಖಲಿಸಬೇಕು. ಮೂರನೇ ವ್ಯಕ್ತಿಯ ದೂರವಾಣಿ ಸಂಖ್ಯೆ ಅಥವಾ ಬ್ಯಾಂಕ್ ಖಾತೆಯನ್ನು ಫಲಾನುಭವಿಗಳ ಖಾತೆಗೆ ಜೋಡಣೆ ಮಾಡುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪಂಚಾಯಿತಿ ಮಟ್ಟದಲ್ಲಿ ಪಂಚ ಗ್ಯಾರಂಟಿ ಸಮಿತಿ

ಪಂಚಾಯಿತಿ ಮಟ್ಟದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಬೇಕು. ಶಾಸಕರು ಈ ಸಮಿತಿಗಳನ್ನು ರಚಿಸಬೇಕು. ಶಾಸಕರು ಸಮಿತಿ ರಚನೆ ಮಾಡದಿದ್ದರೆ ಸರ್ಕಾರವೇ ಸಮಿತಿ ರಚಿಸಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದೇ ವೇಳೆ ಭಾರತ ಜೋಡೋ ಯುವ ಸಂಘದ ನೋಂದಣಿ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದು ಎಂದು ಅವರು ತಿಳಿಸಿದರು.

ShareTweetSendShare
Join us on:

Related Posts

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

by admin
September 1, 2026
0

ಕೊಪ್ಪಳ: ‘ಭ್ರಷ್ಟಾಚಾರದ ಪಿತಾಮಹರೇ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ...

gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

by admin
September 1, 2026
0

ಗದಗ, "ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್...

dk-shivakumar-5-percent-park-land-proposal-lalbagh-drought-declaration

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by admin
September 1, 2026
0

ಬೆಂಗಳೂರು, ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು...

hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

by admin
September 1, 2026
0

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೆಚ್. ವಿ. ರಮೇಶ್ ರವರು ಜವಾಬ್ದಾರಿಯುತ ಅಧಿಕಾರಿಯಾಗಿದ್ದು, ಬೀದಿ ದೀಪಗಳ ನಿರ್ವಹಣೆಯ ಉಸ್ತುವಾರಿಯನ್ನು...

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram