ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

admin by admin
September 1, 2026
in Newsbeat, State, ರಾಜ್ಯ
mysuru-severe-drought-8-taluks-rainfall-deficit-g-parameshwara

mysuru-severe-drought-8-taluks-rainfall-deficit-g-parameshwara

Share on FacebookShare on TwitterShare on WhatsappShare on Telegram

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸ್ಪಷ್ಟ ಸೂಚನೆಗಳನ್ನು ನೀಡಿದರು.

ಈ ಸಭೆಯ ಪ್ರಧಾನ ಉದ್ದೇಶ ಬರದ ಕುರಿತು ಪರಿಶೀಲನೆ ಮಾಡುವುದೇ ಆಗಿದೆ. ಸರ್ಕಾರ ಬರ ನಿರ್ವಹಣೆಯ ಕುರಿತು ಬಹಳ ಗಂಭೀರವಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಬರವನ್ನು ಹಗುರ ಮನಸ್ಥಿತಿಯಾಗಿ ಪರಿಗಣಿಸಬಾರದು. ಜನರ ಮೂಲಭೂತ ಅವಶ್ಯಕತೆಗಳಾದ ಕುಡಿಯುವ ನೀರು, ಆಹಾರ, ಜೀವನೋಪಾಯಕ್ಕೆ ಅಗತ್ಯವಿರುವ ಉದ್ಯೋಗ, ಆರೋಗ್ಯ ಜಾನುವಾರುಗಳಿಗೆ ಮೇವು, ನೀರು ಮುಂತಾದವುಗಳನ್ನು ನೋಡಿಕೊಳ್ಳುವುದಾಗಿದೆ. ಇದನ್ನು ಕಂದಾಯ ಇಲಾಖೆಯು ಇತರೆ ಸಂಬಂಧಿತ ಇಲಾಖೆಗಳ ಜೊತೆ ಸೇರಿ ಜನ-ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕಾಗಿದೆ ಎಂದು ಹೇಳಿದರು.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

ಜೂನ್‌ನಿಂದ ಆಗಸ್ಟ್ ಅಂತ್ಯದವರೆಗೆ ಮೈಸೂರಿನಲ್ಲಿ ವಾಡಿಕೆ ಮಳೆ 310 ಮಿ.ಮೀ ಆಗಬೇಕಿತ್ತು, ಆದರೆ ಕೇವಲ 140 ಮಿ.ಮೀ ಮಳೆಯಾಗಿದೆ. ಅಂದರೆ, ಶೇ. 55 ರಷ್ಟು ತೀವ್ರ ಮಳೆ ಕೊರತೆ ಉಂಟಾಗಿದ್ದು, ಜಿಲ್ಲೆಯು ಕೊರತೆ ಪಟ್ಟಿಯಲ್ಲಿದೆ. ಮೈಸೂರು ಜಿಲ್ಲೆಯಲ್ಲಿ ಜೂನ್‌ನಲ್ಲಿ ಶೇ. 56, ಜುಲೈನಲ್ಲಿ ಶೇ. 61 ಮತ್ತು ಆಗಸ್ಟ್‌ನಲ್ಲಿ ಶೇ. 45ರಷ್ಟು ಮಳೆ ಕೊರತೆ ದಾಖಲಾಗಿದೆ. ಮೈಸೂರು ಜಿಲ್ಲೆಯ 8 ತಾಲೂಕುಗಳನ್ನು (ಹೆಗ್ಗಡದೇವನಕೋಟೆ, ಹುಣಸೂರು, ಕೆ.ಆರ್. ನಗರ, ಮೈಸೂರು, ನಂಜನಗೂಡು, ಸಾಲಿಗ್ರಾಮ, ಸರಗೂರು, ಟಿ. ನರಸೀಪುರ) ‘ತೀವ್ರ’ (Severe) ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಜುಲೈ-2026 ರಿಂದ ಈಚೆಗೆ ಕೇವಲ 1.91 ಲಕ್ಷ ಮಾನವ ದಿನಗಳಷ್ಟು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಆದರೆ ಕಳೆದ ವರ್ಷ ಇದೇ 2 ತಿಂಗಳುಗಳಲ್ಲಿ 4.33 ಲಕ್ಷ ಉದ್ಯೋಗಗಳನ್ನು ಸೃಜಿಸಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.55 ರಷ್ಟು ಕಡಿಮೆಯಾಗಿದೆ. ಉತ್ತಮ ಮಳೆ ಬಂದ ವರ್ಷ 4.33 ಲಕ್ಷ ಉದ್ಯೋಗ ಸೃಷ್ಟಿಯಾದರೆ ಈ ವರ್ಷ ಯಾಕೆ ಇಷ್ಟು ಕಡಿಮೆಯಾಗಿದೆ. ಜನರು ಉದ್ಯೋಗ ಕೇಳುತ್ತಿಲ್ಲವೇ? ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಅವರ ಅಧೀನ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಅಷ್ಟೇ ಅಲ್ಲದೇ, ಮೈಸೂರಿನಲ್ಲಿ ಕೃಷಿ ಬೆಳೆ ವಿಮೆಯೂ ಕಡಿಮೆಯಾಗಿದೆ. ರಾಜ್ಯದಲ್ಲಿ 49.64 ಲಕ್ಷ ರೈತರ ಅರ್ಜಿಗಳಿಗೆ ಹಾಗೂ 33,17,167 ಹೆಕ್ಟೇರ್‌ ಭೂಮಿಗೆ ಬೆಳೆ ವಿಮೆ ಮಾಡಿಸಲಾಗಿದೆ. ಆದರೆ ಮೈಸೂರಿನಲ್ಲಿ ಕೇವಲ 20,836 ಜನ 8,046 ಹೆಕ್ಟೇರ್‌ ಪ್ರದೇಶಕ್ಕೆ ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಯಾಕಿಷ್ಟು ನಿರ್ಲಕ್ಷ್ಯ ಮಾಡುತ್ತಿದ್ದಾರೆ? ರೈತರಿಗೆ ಉತ್ತೇಜನ ನೀಡುವ ಕೆಲಸಗಳನ್ನು ಯಾಕೆ ಮಾಡಲಿಲ್ಲ? ಬೇಜವಾಬ್ದಾರಿತನ ತೋರಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ನಿಮ್ಮ ಅಧಿಕಾರಿಗಳು ಹೇಳಿರುವಂತೆ ನಿಮ್ಮ ಬಳಿ 33 ವಾರಗಳಿಗೆ ಸಾಕಾಗುವಷ್ಟು ಮೇವಿನ ದಾಸ್ತಾನು ಇದೆ. ಈ ಮಾಹಿತಿ ಸರಿಯಿದೆಯೇ ಎಂದು ಪರಿಶೀಲಿಸಿಕೊಳ್ಳಬೇಕಾಗಿದೆ. ಯಾವ ಯಾವ ರೈತರ ಬಳಿ ಕೊಳವೆ ಬಾವಿಗಳಿವೆಯೊ ಅವರಿಗೆ ಮೇವಿನ ಬೀಜಗಳನ್ನು ನೀಡಿ ಮೇವು ಬೆಳೆಯುವಂತೆ ಉತ್ತೇಜನೆ ನೀಡಬೇಕು ಎಂದು ತಿಳಿಸಿದರು.

ನಾವು ಈಗಾಗಲೇ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಪರಿಶೀಲನಾ ಸಭೆಗಳನ್ನು ಮಾಡಿ ಮುಗಿಸಿದ್ದೇವೆ. ಸ್ವತಃ ನಾನು ಬೆಳಗಾವಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪರಿಶೀಲನೆ ನಡೆಸಿದ್ದೇನೆ. ಸ್ಥಳ ಪರಿಶೀಲನೆ ಮಾಡಿದ್ದೇನೆ ಎಂದರು.

ಮೈಸೂರು ಜಿಲ್ಲೆಯಲ್ಲಿ 6 ತಾಲೂಕುಗಳ 14 ಗ್ರಾಮ ಪಂಚಾಯತಿಗಳಲ್ಲಿ ಸಮಸ್ಯೆಯಿದ್ದು, 6 ಗ್ರಾಮಗಳಿಗೆ 6 ಟ್ಯಾಂಕರ್‌ಗಳ ಮೂಲಕ ಹಾಗೂ 9 ಗ್ರಾಮಗಳಿಗೆ 10 ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಒದಗಿಸಲಾಗುತ್ತಿದೆ. ಮೈಸೂರು ಜಿಲ್ಲೆಯ 3 ನಗರ ಸ್ಥಳೀಯ ಸಂಸ್ಥೆಗಳ (ULBs) 13 ವಾರ್ಡ್‌ಗಳಿಗೆ 14 ಟ್ಯಾಂಕರ್‌ಗಳನ್ನು ಬಳಸಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟಾರೆ 33 ವಾರಗಳಿಗೆ ಆಗುವಷ್ಟು 7,04,890 ಟನ್ ಮೇವು ಲಭ್ಯವಿದೆ. ಮೈಸೂರು (25 ವಾರ), ಹುಣಸೂರು (25 ವಾರ) ಹಾಗೂ ಪಿರಿಯಾಪಟ್ಟಣ (26 ವಾರ) ತಾಲೂಕುಗಳಲ್ಲಿ ಲಭ್ಯತೆ ಕಡಿಮೆಯಿದೆ. ಮೇವಿನ ಕಿಟ್‌ಗಳನ್ನು ವಿತರಿಸಲು ಪಶುಸಂಗೋಪನಾ ಇಲಾಖೆಗೆ ಸರ್ಕಾರ ಈಗಾಗಲೇ ₹25 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.

ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಹಣವಿದೆ. ಈ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಇತರೆ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ ಬಳಸಿ. ಅನುದಾನಕ್ಕಾಗಿ ಕಾಯುವ ನೆಪವೊಡ್ಡಿ ಪರಿಹಾರ ಕಾರ್ಯ ವಿಳಂಬ ಮಾಡಬೇಡಿ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

by admin
September 1, 2026
0

ಕೊಪ್ಪಳ: ‘ಭ್ರಷ್ಟಾಚಾರದ ಪಿತಾಮಹರೇ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram