ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿರುವ 14ನೇ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ಆದೇಶ ಇನ್ನೂ ಹೊರಬಾರದ ಹಿನ್ನೆಲೆಯಲ್ಲಿ, ವಿಚಾರಣೆಗೆ ಹೆಚ್ಚಿನ ಸಮಯ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದೇ ವೇಳೆ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನೂ ಮುಂದೂಡುವಂತೆ ಅವರು ಕೋರಿದರು.
SPP ಅವರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಪ್ರದೋಷ್ ಅವರನ್ನು ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಕುರಿತು ಹಾಗೂ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಪ್ರಮುಖವಾಗಲಿದೆ.








