ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಕುರಿತು GBA ಉಪ ನಿರ್ದೇಶಕರು ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 4ರಂದು GBA ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ. ಇದರ ಜೊತೆಗೆ ಮಾಂಸದ ಅಂಗಡಿಗಳಲ್ಲಿಯೂ ಯಾವುದೇ ರೀತಿಯ ಮಾಂಸ ಮಾರಾಟಕ್ಕೆ ಅವಕಾಶ ಇರುವುದಿಲ್ಲ.
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
GBA ವ್ಯಾಪ್ತಿಯಲ್ಲಿ ಹೊರಡಿಸಿರುವ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಿಷೇಧದ ನಡುವೆಯೂ ಮಾಂಸ ಮಾರಾಟ ನಡೆಸುವವರು ಅಥವಾ ಮಾಂಸದ ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಹಬ್ಬದ ಆಚರಣೆಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ.







