ADVERTISEMENT
Thursday, September 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

Shwetha by Shwetha
September 10, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ ನ್ಯಾಯಾಲಯದ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಮಿಕರ ಹಿತರಕ್ಷಣೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಡಿ ಕೆ ಶಿವಕುಮಾರ್ ಅವರ ಈ ನಡೆಯನ್ನು ಮುಕ್ತಕಂಠದಿಂದ ಕೊಂಡಾಡಿದೆ.

ಗಿಮಿಕ್ ಎನ್ನುವವರಿಗೆ ಹೈಕೋರ್ಟ್ ತಕ್ಕ ಉತ್ತರ

Related posts

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

September 10, 2026
ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

September 10, 2026

ಮಂಗಳವಾರ ಬೆಳ್ಳಂಬೆಳಿಗ್ಗೆ ಯಶವಂತಪುರ ಮಾರುಕಟ್ಟೆಗೆ ಭೇಟಿ ನೀಡಿದ್ದ ಡಿ ಕೆ ಶಿವಕುಮಾರ್, ಅಲ್ಲಿನ ಈರುಳ್ಳಿ, ಬೆಳ್ಳುಳ್ಳಿ ಹಾಗೂ ಶುಂಠಿಯ ಗುಣಮಟ್ಟ ಮತ್ತು ದರಗಳ ಬಗ್ಗೆ ಮಾಹಿತಿ ಪಡೆದಿದ್ದರು. ಅಷ್ಟೇ ಅಲ್ಲದೆ, ಮಾರುಕಟ್ಟೆಯ ಕಾರ್ಮಿಕ ಮಹಿಳೆಯರ ಜೊತೆ ನೆಲದ ಮೇಲೆ ಕುಳಿತು ಅವರ ಕಷ್ಟಸುಖಗಳನ್ನು ವಿಚಾರಿಸಿದ್ದರು. ಈ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರಿದ್ದ ಪೀಠವು, ರಾಜಕೀಯವಾಗಿ ಕೆಲವರು ಇದನ್ನು ಗಿಮಿಕ್ ಎಂದು ಟೀಕಿಸಬಹುದು. ಆದರೆ ವಾಸ್ತವದಲ್ಲಿ ಇದು ಅತ್ಯಂತ ಶ್ಲಾಘನೀಯ ಕೆಲಸ. ಇದೊಂದು ಗ್ರೇಟ್ ಜಾಬ್ ಎಂದು ಅಭಿಪ್ರಾಯಪಟ್ಟಿದೆ.

ಎಪಿಎಂಸಿಗಳ ದುಸ್ಥಿತಿಗೆ ನ್ಯಾಯಾಲಯದ ಕಳವಳ

ಇದೇ ಸಂದರ್ಭದಲ್ಲಿ ರಾಜ್ಯದ ಎಪಿಎಂಸಿ ಮಾರುಕಟ್ಟೆಗಳ ಇಂದಿನ ಪರಿಸ್ಥಿತಿಯ ಬಗ್ಗೆ ನ್ಯಾಯಪೀಠ ತೀವ್ರ ಬೇಸರ ವ್ಯಕ್ತಪಡಿಸಿತು. ಇಂದು ಎಪಿಎಂಸಿ ಮಳಿಗೆಗಳು ಮೂಲ ಹಂಚಿಕೆದಾರರ ಬಳಿ ಉಳಿದಿಲ್ಲ. ಅವುಗಳನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ ಅಥವಾ ಬೇರೆಯವರ ನಿಯಂತ್ರಣದಲ್ಲಿವೆ. ಹಲವು ಊರುಗಳಲ್ಲಿರುವ ಎಪಿಎಂಸಿಗಳು ಅಕ್ಷರಶಃ ಸತ್ತು ಹೋಗಿವೆ ಎಂದು ಪೀಠವು ಕಟುವಾಗಿ ಟೀಕಿಸಿತು. ಮಾರುಕಟ್ಟೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಶಿಸ್ತು ಇರಬೇಕು ಎಂದು ನ್ಯಾಯಾಲಯ ಆಶಿಸಿದೆ.

ಬಂಡವಾಳಶಾಹಿಗಳ ಕಪಿಮುಷ್ಟಿಯಿಂದ ಕಾರ್ಮಿಕರ ಬಿಡುಗಡೆಗೆ ಸೂಚನೆ

ಕಾರ್ಮಿಕರ ಹಿತದೃಷ್ಟಿಯಿಂದ ಕಠಿಣ ಮಾತುಗಳನ್ನಾಡಿದ ನ್ಯಾಯಮೂರ್ತಿಗಳು, ಕಾರ್ಮಿಕರನ್ನು ಬಂಡವಾಳಶಾಹಿಗಳ ಶೋಷಣೆಯಿಂದ ಮುಕ್ತಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು. ಕಾರ್ಮಿಕರು ವಿಷ ಕುಡಿದು ಸಾಯಬಾರದು ಎಂದರೆ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗಬೇಕು. ಕನಿಷ್ಠ ವೇತನ ಕಾಯ್ದೆಯನ್ನು ಚಾಚೂ ತಪ್ಪದೆ ಜಾರಿಗೆ ತರಬೇಕು. ಕನಿಷ್ಠ ವೇತನ ನೀಡುವುದರಲ್ಲಿ ಯಾವುದೇ ತಾಂತ್ರಿಕ ನೆಪಗಳನ್ನು ಒಡ್ಡಬಾರದು ಎಂದು ಅರ್ಜಿದಾರರ ಪರ ವಕೀಲರಿಗೆ ಎಚ್ಚರಿಕೆ ನೀಡಿದರು.

ಕಾನೂನು ಗೌರವಿಸಿದರೆ ಅದು ನಿಮ್ಮನ್ನು ರಕ್ಷಿಸುತ್ತದೆ

ಕಾರ್ಮಿಕರ ಹಿತರಕ್ಷಣೆ ಮತ್ತು ಕಾನೂನಿನ ಪಾಲನೆಯ ಬಗ್ಗೆ ಕಿವಿಮಾತು ಹೇಳಿದ ನ್ಯಾಯಪೀಠ, ಕಾನೂನು ಇರುವುದು ಎಲ್ಲರಿಗೂ ರಕ್ಷಣೆ ನೀಡಲು. ನೀವು ಕಾನೂನನ್ನು ಗೌರವಿಸಿದರೆ ಮತ್ತು ಪಾಲಿಸಿದರೆ ಮಾತ್ರ ಕಾನೂನು ಸಂಕಷ್ಟದ ಸಮಯದಲ್ಲಿ ನಿಮ್ಮನ್ನು ರಕ್ಷಿಸುತ್ತದೆ. ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ಗೌರವ ಸಿಗುವಂತೆ ನೋಡಿಕೊಳ್ಳುವುದು ಸರ್ಕಾರದ ಮತ್ತು ಮಾರುಕಟ್ಟೆ ಸಮಿತಿಗಳ ಜವಾಬ್ದಾರಿ ಎಂದು ಹೈಕೋರ್ಟ್ ನೆನಪಿಸಿತು. ಡಿ ಕೆ ಶಿವಕುಮಾರ್ ಅವರ ಭೇಟಿಯು ಇಂತಹ ಸಕಾರಾತ್ಮಕ ಬದಲಾವಣೆಗಳಿಗೆ ನಾಂದಿಯಾಗಲಿ ಎಂದು ನ್ಯಾಯಾಲಯ ಆಶಿಸಿದೆ.

ShareTweetSendShare
Join us on:

Related Posts

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

by Shwetha
September 10, 2026
0

ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳ ಪರಿಷ್ಕರಣೆ ನಡೆಸಿದ್ದು, ಇದೀಗ ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯೂ ಚರ್ಚೆಗೆ ಬಂದಿದೆ. ಇದರ ಭಾಗವಾಗಿ ರೇಷನ್...

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

by Shwetha
September 10, 2026
0

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೆತ್ತ ತಂದೆ-ತಾಯಿಯನ್ನೇ ನ್ಯಾಯಾಲಯಕ್ಕೆ ಎಳೆದು ತಂದಿದ್ದ ಮಗನಿಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ಬುದ್ಧಿಮಾತು ಹೇಳಿದೆ. ಕಾನೂನು ಹಕ್ಕುಗಳ ಜೊತೆಗೆ ಮಾನವೀಯ ಸಂಬಂಧಗಳಿಗೂ ಮಹತ್ವವಿದೆ...

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

by Shwetha
September 10, 2026
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ...

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 10, 2026
0

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾದ ಭಾರತ್ ಜೋಡೋ ಯಾತ್ರೆಯ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಕೇಂದ್ರದ ಬಿಜೆಪಿ ಸರ್ಕಾರದ...

ವಂದೇ ಮಾತರಂ ವಿವಾದ: ಅಬ್ದುಲ್ಲಾ ಜೋಡಿ ಗೌರವ, ಕಾಂಗ್ರೆಸ್ ಆಕ್ಷೇಪ — ಬಿಜೆಪಿ ವಾಗ್ದಾಳಿ

ವಂದೇ ಮಾತರಂ ವಿವಾದ: ಅಬ್ದುಲ್ಲಾ ಜೋಡಿ ಗೌರವ, ಕಾಂಗ್ರೆಸ್ ಆಕ್ಷೇಪ — ಬಿಜೆಪಿ ವಾಗ್ದಾಳಿ

by Shwetha
September 10, 2026
0

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ನುಡಿಸಿದ ವಿಚಾರ ಇದೀಗ ರಾಷ್ಟ್ರ ರಾಜಕಾರಣದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram