ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

admin by admin
September 18, 2026
in Cinema, Newsbeat, Uncategorized, ಮನರಂಜನೆ
kiccha-sudeep-devaraya-movie-announcement-birthday-gift-peoples-media-factory

kiccha-sudeep-devaraya-movie-announcement-birthday-gift-peoples-media-factory

Share on FacebookShare on TwitterShare on WhatsappShare on Telegram

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಐತಿಹಾಸಿಕ ಪ್ರಾಜೆಕ್ಟ್ ‘ದೇವರಾಯ’ ಅಧಿಕೃತವಾಗಿ ಘೋಷಣೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆದಿದೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ಪ್ರಿಯಾ ಸುದೀಪ್ ಒಡೆತನದ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋಸ್’ ಜಂಟಿಯಾಗಿ ಈ ಬೃಹತ್ ಕ್ಯಾನ್ವಾಸ್‌ನ ಸಿನಿಮಾವನ್ನು ನಿರ್ಮಿಸಲು ಮುಂದಾಗಿವೆ.

ವಿಜಯನಗರ ಸಾಮ್ರಾಜ್ಯವನ್ನು ಸುವರ್ಣ ಯುಗಕ್ಕೆ ಕೊಂಡೊಯ್ದು, ಸಾಹಸ, ಚಾಣಾಕ್ಷ ಆಡಳಿತ ಹಾಗೂ ಸಾಹಿತ್ಯ-ಕಲೆಗಳ ಪೋಷಣೆಗೆ ಹೆಸರಾದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ಪಾತ್ರದಲ್ಲಿ ಸುದೀಪ್ ಬಣ್ಣ ಹಚ್ಚಲಿದ್ದಾರೆ. ಈ ಹಿಂದೆ ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್ ಅವರು ಕೃಷ್ಣದೇವರಾಯರ ಪಾತ್ರವನ್ನು ಬೆಳ್ಳಿತೆರೆಯ ಮೇಲೆ ಅಜರಾಮರಗೊಳಿಸಿದ್ದರು. ಇದೀಗ ದಶಕಗಳ ಬಳಿಕ, ಇಂದಿನ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅದ್ದೂರಿ ಮೇಕಿಂಗ್‌ನೊಂದಿಗೆ ಮೂಡಿಬರಲಿರುವ ಈ ಚಿತ್ರವು ಸುದೀಪ್ ಅವರ ಸಿನಿಪಯಣದಲ್ಲೇ ಅತ್ಯಂತ ದೊಡ್ಡ ಮೈಲಿಗಲ್ಲಾಗುವ ಎಲ್ಲ ಲಕ್ಷಣಗಳನ್ನೂ ಹೊಂದಿದೆ.

Related posts

kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

September 18, 2026
kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

September 18, 2026

ಪ್ರಿಯಾ ಸುದೀಪ್ ಅರ್ಪಿಸುತ್ತಿರುವ ಈ ಚಿತ್ರಕ್ಕೆ ಟಿ.ಜಿ. ವಿಶ್ವಪ್ರಸಾದ್‌ ಹಾಗೂ ಕೃತಿ ಪ್ರಸಾದ್‌ ಬಂಡವಾಳ ಹೂಡುತ್ತಿದ್ದಾರೆ. ತೆಲುಗಿನಲ್ಲಿ ‘ಕಾರ್ತಿಕೇಯ 2’, ‘ಧಮಾಕಾ’, ‘ಬ್ರೋ’ ಹಾಗೂ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಅಂತಹ ಪ್ಯಾನ್-ಇಂಡಿಯಾ ಮತ್ತು ಬಿಗ್-ಬಜೆಟ್ ಚಿತ್ರಗಳನ್ನು ನಿರ್ಮಿಸಿ ಜನಪ್ರಿಯತೆ ಗಳಿಸಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ, ಇದೀಗ ಕನ್ನಡದಲ್ಲೂ ಭದ್ರವಾಗಿ ನೆಲೆವೂರಲು ಸಜ್ಜಾಗಿದೆ.

ಸದ್ಯಕ್ಕೆ ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಮೂಲಕ ಅಭಿಮಾನಿಗಳಲ್ಲಿ ರೋಮಾಂಚನ ಸೃಷ್ಟಿಸಿರುವ ಚಿತ್ರತಂಡ, ಈ ಬೃಹತ್ ಚಿತ್ರವನ್ನು ನಿರ್ದೇಶನ ಮಾಡುವುದು ಯಾರು ಎಂಬುದನ್ನು ಸದ್ಯಕ್ಕೆ ಗೌಪ್ಯವಾಗಿಟ್ಟಿದೆ. ಚಿತ್ರೀಕರಣ ಹಾಗೂ ತಾಂತ್ರಿಕ ಸಿದ್ಧತೆಗಳಿಗೆ ಹೆಚ್ಚಿನ ಸಮಯಾವಕಾಶ ಬೇಕಿರುವುದರಿಂದ, ‘ದೇವರಾಯ’ ಚಿತ್ರವನ್ನು 2027ರ ಡಿಸೆಂಬರ್‌ನಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತಂಡ ಯೋಜನೆ ರೂಪಿಸಿಕೊಂಡಿದೆ.

Tags: #Devaraya #KicchaSudeep #SudeepBirthdayGift #PriyaSudeep #PeopleMediaFactory #SupriyanviPictureStudios #PanIndia #Sandalwood #saakshatv
ShareTweetSendShare
Join us on:

Related Posts

kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಖ್ಯಾತ ತಮಿಳು ನಿರ್ದೇಶಕ ಹಾಗೂ ನಟ ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

hosa-jeevana-movie-eeno-hambala-song-released-srimurali-rangayana-raghu-prabhu-mundkur

ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆ

by admin
September 18, 2026
0

ಬೆಂಗಳೂರು* : ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ 'ಹೊಸ ಜೀವನ' ಚಿತ್ರದ ಮೊದಲ ಸುಮಧುರ ಗೀತೆ "ಏನೇನೋ ಹಂಬಲ..." ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ....

bail-movie-cheluve-kele-cheluve-romantic-song-released-shivarajkumar-october-2-release

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್: ಅಕ್ಟೋಬರ್ 2ಕ್ಕೆ ಸಿನಿಮಾ ತೆರೆಗೆ!

by admin
September 17, 2026
0

ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಬೇಲ್’ ಚಿತ್ರದಿಂದ ಮೊದಲ ರೊಮ್ಯಾಂಟಿಕ್ ಮೆಲೋಡಿ ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದ್ದು, ಸಂಗೀತ ಪ್ರೇಮಿಗಳ ಮನಗೆದ್ದಿದೆ....

remada-oorali-movie-release-september-25-manoj-kumar-sriram-tapaswini-poonacha

ಸೆಪ್ಟೆಂಬರ್ 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ:

by admin
September 17, 2026
0

ಹಾಡುಗಳ ಸಂಭ್ರಮದೊಂದಿಗೆ ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ನೂತನ ಚಲನಚಿತ್ರ ‘ಪ್ರೇಮದ ಊರಲಿ’ ಸೆಪ್ಟೆಂಬರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram