ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

Shwetha by Shwetha
September 20, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕೇಂದ್ರ ಸರ್ಕಾರದ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಅವರು ಅತ್ಯಂತ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಟ್ಟಡ ನಿರ್ಮಾಣ ಶ್ರಮಿಕರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು ಮೋದಿ ಅವರ ವಿರುದ್ಧ ಕೆಂಡ ಕಾರಿದ್ದಾರೆ.

ಮದುವೆಯೇ ಆಗದವನಿಗೆ ತ್ರಿಪಲ್ ತಲಾಕ್ ಯಾಕೆ ಎಂದು ಪ್ರಶ್ನಿಸಿದ ಹರಿಪ್ರಸಾದ್ ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ಪ್ರಹಾರ ನಡೆಸಿದರು. ಕೇಂದ್ರದಲ್ಲಿ ನರೇಂದ್ರ ಮೋದಿ ಎಂಬ ಮಹಾ ಮಾನವ ಪ್ರಧಾನಿಯಾಗಿ ಕುಳಿತಿದ್ದಾರೆ. ಇವರಿಗೆ ತ್ರಿಪಲ್ ತಲಾಕ್ ಕುರಿತು ಅಷ್ಟೊಂದು ಕಾಳಜಿ ಯಾಕೆ? ತಾನೇ ಮದುವೆಯಾಗದವನಿಗೆ ತ್ರಿಪಲ್ ತಲಾಕ್ ನ ಅವಶ್ಯಕತೆ ಏನಿದೆ ಎಂದು ಲೇವಡಿ ಮಾಡುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

Related posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

September 20, 2026
ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

September 20, 2026

ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ದೇಶದ ಪ್ರಗತಿ ಶೂನ್ಯವಾಗಿದೆ ಎಂದು ಟೀಕಿಸಿದ ಅವರು ಪ್ರಧಾನಿಯಾದ ಮೇಲೆ 12 ನಿಮಿಷವಾದರೂ ಉಪಯುಕ್ತವಾಗಿ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅತಿ ಹೆಚ್ಚಿನ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಿತ್ತು. ನೆಹರೂ ಅವರಿಂದ ನರಸಿಂಹರಾವ್ ವರೆಗಿನ ನಾಯಕರು ಸಂಸ್ಥೆಗಳನ್ನು ಕಟ್ಟಿದರೆ ಈ ಮಹಾ ಮಾನವ ಕೇವಲ 26 ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಿದ್ದಾರೆ. ಗುಜರಾತ್ ನಲ್ಲಿ ಕೂಡ ಇವರು ಯಾವುದೇ ಸಾರ್ವಜನಿಕ ಉದ್ದಿಮೆಗಳನ್ನು ಮಾಡಿಲ್ಲ ಬದಲಾಗಿ ಅದಾನಿ ಮತ್ತು ಅಂಬಾನಿಯಂತಹ ಬಂಡವಾಳಶಾಹಿಗಳಿಗೆ ಎಲ್ಲವನ್ನೂ ಧಾರೆ ಎರೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಧರ್ಮ ಮತ್ತು ರಾಜಕಾರಣದ ವಿಚಾರವಾಗಿಯೂ ಹರಿಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 12 ವರ್ಷಗಳಿಂದ ದೇಶದಲ್ಲಿ ಕೇವಲ ಧರ್ಮಾಧಾರಿತ ರಾಜಕಾರಣ ನಡೆಯುತ್ತಿದೆ. ಧರ್ಮ ಎಂಬುದು ಮನೆಯೊಳಗೆ ಇರಬೇಕಾದ ವಿಚಾರ. ನಾವು ಪೂಜೆ ಪ್ರಾರ್ಥನೆಗಳನ್ನು ಮನೆಯಲ್ಲಿ ಮಾಡುತ್ತೇವೆ ಆದರೆ ಸರ್ಕಾರಕ್ಕೆ ಧರ್ಮದ ಅಗತ್ಯವಿಲ್ಲ. ಇಂದು ಗಣಪತಿ ಭಕ್ತಿ ಎನ್ನುವುದು ಕೇವಲ ಮಸೀದಿಗಳ ಮುಂದೆ ಹೋದಾಗ ಮಾತ್ರ ಬರುತ್ತದೆ. ಮಸೀದಿ ಮುಂದೆ ಡಿಜೆ ಹಾಕಿಕೊಂಡು ಕುಣಿಯುವುದು ಭಕ್ತಿಯಲ್ಲ ಎಂದು ಅವರು ಕಿಡಿ ಕಾರಿದರು. ಧರ್ಮದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸಿ ಅವರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು ಶ್ರಮಿಕ ವರ್ಗದವರು ಹೋರಾಟದ ಮೂಲಕ ಬದಲಾವಣೆ ತರಬೇಕೆಂದು ಕರೆ ನೀಡಿದರು.

ShareTweetSendShare
Join us on:

Related Posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ ಪ್ರಿಯಾಂಕ್ ಖರ್ಗೆ

by Shwetha
September 20, 2026
0

ಕರಾವಳಿ ಕರ್ನಾಟಕವನ್ನು ಬಿಜೆಪಿ ಕೇವಲ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಬಳಸಿಕೊಂಡಿತ್ತು ಆದರೆ ನಾವು ಅದನ್ನು ಅಭಿವೃದ್ಧಿಯ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by Shwetha
September 20, 2026
0

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 20, 2026
0

ದಿನ ಭವಿಷ್ಯ: 20-09-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ ಮತ್ತು ಮೇಲಧಿಕಾರಿಗಳಿಂದ ಪ್ರಶಂಸೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram