ಬೆಂಗಳೂರು: ರಾಜಾಜಿನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಕೆಟಿಎಸ್ವಿ ಪ್ರಾಂಶುಪಾಲರಾದ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರ ಅಭಿನಂದನಾ ಸಮಾರಂಭ ಅಕ್ಟೋಬರ್ 4ರಂದು ಬೆಂಗಳೂರಿನ ಶ್ರೀ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಪ್ರಾಚಾರ್ಯ ರತ್ನ ಶ್ರೀಕಂಠಯ್ಯ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಸಮಾರಂಭವನ್ನು ನಾಡೋಜ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಅವರು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಘನ ಉಪಸ್ಥಿತರಾಗಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷರು ಹಾಗೂ ಕೆಎಕೆಟಿಎಸ್ ಅಧ್ಯಕ್ಷರಾದ ಶ್ರೀಕಾಂತ್ ಅವರು ವಹಿಸಲಿದ್ದಾರೆ.
ಉದ್ಯಮಿ ಎಂ.ಕೆ. ಚಂದ್ರಕುಮಾರ್, ಕೆಎಕೆಟಿಎಸ್ ಕಾರ್ಯಾಧ್ಯಕ್ಷ ಅರ್ಜುನ್, ಬಿಡಿಎ ಸದಸ್ಯ ಪಿ. ಗಾಂಧಿ ಹಾಗೂ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕ ಎಲ್. ಮುತ್ತುರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಅಗ್ನಿವಂಶ ಕ್ಷತ್ರಿಯ ತಿಗಳರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ, ಬೆಂಗಳೂರು ಉತ್ತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ, ಅನುದಾನಿತ ನೌಕರರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.








