ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

admin by admin
October 6, 2026
in Newsbeat, State, ನ್ಯೂಸ್ ಬೀಟ್, ರಾಜ್ಯ
karnataka-drought-relief-r-ashok-criticizes-government-siddaramaiah-politics

karnataka-drought-relief-r-ashok-criticizes-government-siddaramaiah-politics

Share on FacebookShare on TwitterShare on WhatsappShare on Telegram

ಬೆಂಗಳೂರು,  ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದ್ದಾರೆ.

ರಾಜಭವನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ. ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರನ್ನು ಅನವಶ್ಯಕವಾಗಿ ಕರೆಸಿ ವಿಚಾರಣೆ ಮಾಡಲಾಗುತ್ತಿದೆ. ಯಾರು ಬೇಕಾದರೂ ಫಾರ್ಮ್‌ 7 ಸಲ್ಲಿಸಬಹುದು ಹಾಗೂ ಪ್ರಕರಣ ದಾಖಲಿಸಲು ಯಾರಿಗೂ ಹೇಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದರೆ ಅದನ್ನು ಮತದಾರರು ಪ್ರಶ್ನೆ ಮಾಡಬಹುದು. ಇಲ್ಲಿ ಪೊಲೀಸರು ಅಥವಾ ಸರ್ಕಾರ ಮಧ್ಯಪ್ರವೇಶ ಮಾಡುವಂತಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಪೊಲೀಸರ ಮೂಲಕ ಫಾರ್ಮ್‌ 7 ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುತ್ತಿದೆ ಎಂದರು.

Related posts

parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

October 6, 2026
shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

October 6, 2026

ಕಾಂಗ್ರೆಸ್‌ಗೆ ಚುನಾವಣೆಯ ಭಯ ಶುರುವಾಗಿದೆ. ಮುಂದೆ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿದೆ. ಆದ್ದರಿಂದ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಬಿ.ಕೆ.ಹರಿಪ್ರಸಾದ್‌ ತಮ್ಮ ಹಳೆಯ ದಿನಗಳಂತೆಯೇ ರೌಡಿಗಳಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಈ ಗೂಂಡಾಗಿರಿಗೆ ನಾವು ಭಯ ಪಡುವುದಿಲ್ಲ. ಬಿಜೆಪಿ ಕಾರ್ಯಕರ್ತರನ್ನು ಸರ್ಕಾರ ಟಾರ್ಗೆಟ್‌ ಮಾಡಬಾರದು, ಸರ್ಕಾರವನ್ನು ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ. ಡಿಜಿ ಹಾಗೂ ಮುಖ್ಯ ಕಾರ್ಯದರ್ಶಿಯನ್ನು ಕರೆದು ಮಾತಾಡುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದರು.

ಬಸ್‌ ಟಿಕೆಟ್‌ ದರ ಏರಿಕೆ

ಬಸ್‌ ಟಿಕೆಟ್‌ ದರ ಏರಿಕೆ ಮೂಲಕ ಜನರ ಮೇಲೆ ಹೊರೆ ಹೇರಲಾಗುತ್ತಿದೆ. ಉಚಿತ ಗ್ಯಾರಂಟಿಗಾಗಿ ಜನರ ಮೇಲೆ ಹೊರೆ ಹಾಕುವುದು ಸರಿಯಲ್ಲ. ಇದಕ್ಕೆ ಬೇರೆ ಯಾವುದೇ ಕಾರಣವಿಲ್ಲ. ಮೊದಲಿಗೆ ಉಚಿತ ಎಂದು ಹೇಳಿ ನಂತರ ಜನರಿಂದ ಲೂಟಿ ಮಾಡಲಾಗುತ್ತಿದೆ. ಕೋಲಾರದಲ್ಲಿ ಒಂದು ಆಡಿಯೋ ಬಂದಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದಲೇ ಗುತ್ತಿಗೆದಾರರಿಂದ ವಸೂಲಿ ಮಾಡಲಾಗುತ್ತಿದೆ. ಹಾಲಿನ ದರ ಹೆಚ್ಚಳ ಮಾಡಬಾರದು ಎಂದು ನಾವು ಆಗ್ರಹ ಮಾಡಿದ್ದೆವು. ರೈತರಿಗೆ 8 ರೂ. ಪ್ರೋತ್ಸಾಹಧನ ನೀಡಲಾಗುವುದೆಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಈ ಭರವಸೆ ನೀಡಿ ಈಗ ನನ್ನ ಮಗನನ್ನು ನೋಡಿಕೊಳ್ಳಿ ಎಂದು ಬೇಡುತ್ತಿದ್ದಾರೆ. ಮುಂದಿನ ಬಜೆಟ್‌ 2 ಲಕ್ಷ ಕೋಟಿ ರೂ. ಸಾಲ ಮಾಡುವ ಸ್ಥಿತಿ ಬರಲಿದೆ. ಕಾಂಗ್ರೆಸ್‌ ತೊಲಗಿದರೆ ಮಾತ್ರ ಜನರಿಗೆ ನೆಮ್ಮದಿ ಎಂದರು.

Tags: #RAshoka #BJPKarnataka #Governor #RajBhavan #CongressGovernment #KarnatakaPolitics #BengaluruNews #ಆರ್ಅಶೋಕ್ #ರಾಜಭವನ #ಬಿಜೆಪಿ #ಕರ್ನಾಟಕರಾಜಕೀಯ #ಬೆಂಗಳೂರು #ashok
ShareTweetSendShare
Join us on:

Related Posts

parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

by admin
October 6, 2026
0

ಬೆಂಗಳೂರು, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, 50%ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಕಡೆ ಕುಡಿಯುವ ನೀರಿಗೂ ಹಾಹಾಕಾರ...

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

pandavapura-free-health-camp-darshan-puttannaiah-october-8]

ಪಾಂಡವಪುರದಲ್ಲಿ ಅಕ್ಟೋಬರ್ 8 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

by admin
October 6, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ ಆಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗ ಪಾಂಡವಪುರ: ಸಮಾಜದ...

champions-of-care-vantara-anant-ambani-supports-animal-welfare-organisations

ಚಾಂಪಿಯನ್ಸ್ ಆಫ್ ಕೇರ್’: ರಾಜ್ಯದ 3 ಸಂಸ್ಥೆಗಳೂ ಸೇರಿ ದೇಶದ 50ಕ್ಕೂ ಹೆಚ್ಚು ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ವಂತಾರಾ ಬೆಂಬಲ

by admin
October 6, 2026
0

* ಅನಂತ್ ಅಂಬಾನಿಯವರ ‘ಚಾಂಪಿಯನ್ಸ್ ಆಫ್ ಕೇರ್’ಅಭಿಯಾನ ಆರಂಭ * ಪ್ರತಿವರ್ಷ 20 ಲಕ್ಷ ಅಶಕ್ತ ಪ್ರಾಣಿಗಳಿಗೆ ಸಿಗಲಿದೆ ನೆರವು * ಬೀದಿ ನಾಯಿ, ಬೆಕ್ಕು, ಅನಾಥ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram