ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರೇಮದ ಊರಲಿ’ ಚಿತ್ರತಂಡಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಮೆಚ್ಚುಗೆ: ಸುಂದರ ಪ್ರೇಮಕಥೆಗೆ ನಟಿಯ ಶುಭಹಾರೈಕೆ!

admin by admin
October 8, 2026
in Newsbeat, Cinema, ನ್ಯೂಸ್ ಬೀಟ್, ಮನರಂಜನೆ
premada-oorali-rashmika-ram-appreciation-kannada-movie

premada-oorali-rashmika-ram-appreciation-kannada-movie

Share on FacebookShare on TwitterShare on WhatsappShare on Telegram

 

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೀಗ ಚಿತ್ರತಂಡಕ್ಕೆ ನಟಿ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಸಾಥ್ ನೀಡಿದ್ದಾರೆ. ಚಿತ್ರದ ಯಶಸ್ಸಿಗೆ ಇಡೀ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿರುವ ಅವರು, ಚಿತ್ರದ ಕಥೆ ಹಾಗೂ ನಿರೂಪಣೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Related posts

parks-land-use-bill-withdrawn-bjp-victory-r-ashoka-seven-day-assembly

‘ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

October 8, 2026
samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

October 8, 2026

ಈ ಕುರಿತು ಮಾತನಾಡಿರುವ ರಚಿತಾ ರಾಮ್, “ಮೊದಲನೆಯದಾಗಿ ‘ಪ್ರೇಮದ ಊರಲಿ’ ಸಿನಿಮಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿರ್ದೇಶಕ ಮನೋಜ್ ಕುಮಾರ್ ಅವರಿಗೆ ವಿಶೇಷ ಧನ್ಯವಾದಗಳು. ಒಂದು ಅದ್ಭುತವಾದ ಮತ್ತು ಸುಂದರವಾದ ಪ್ರೇಮಕಥೆಯನ್ನು ಕನ್ನಡಿಗರಿಗೆ ತಲುಪಿಸಿ, ಪ್ರತಿಯೊಬ್ಬರ ಮನಸ್ಸು ಗೆಲ್ಲುವಲ್ಲಿ ನೀವು ಯಶಸ್ವಿಯಾಗಿದ್ದೀರಿ” ಎಂದು ಚಿತ್ರತಂಡದ ಪ್ರಯತ್ನವನ್ನು ಕೊಂಡಾಡಿದ್ದಾರೆ.

ಚಿತ್ರದಲ್ಲಿ ನಟಿಸಿರುವ ಕಲಾವಿದರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ನಟಿ, “ನನ್ನ ನೆಚ್ಚಿನ ನಟ ರಂಗಾಯಣ ರಘು ಸರ್, ನಾಯಕ ಶ್ರೀರಾಮ್, ತಪಸ್ವಿನಿ, ರಮಿಕಾ, ಇಳಾ ವಿಟ್ಲ ಸೇರಿದಂತೆ ಇಡೀ ತಾರಾಗಣ ಅತ್ಯುತ್ತಮವಾಗಿ ನಟಿಸಿದೆ. ಸಿನಿಮಾಗೆ ಎಲ್ಲಾ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಒಂದು ಸಿನಿಮಾದಲ್ಲಿ ಉತ್ತಮ ಕಂಟೆಂಟ್, ಗಟ್ಟಿಯಾದ ಕಥೆ ಮತ್ತು ಸ್ಕ್ರೀನ್‌ಪ್ಲೇ ಇದ್ದು ಅದು ಜನರ ಹೃದಯ ಮುಟ್ಟಿದರೆ ಖಂಡಿತವಾಗಿಯೂ ದೊಡ್ಡ ಮಟ್ಟದ ಗೆಲುವು ಸಿಗುತ್ತದೆ ಎಂಬುದನ್ನು ನಾವು ಮೊದಲಿನಿಂದಲೂ ನೋಡುತ್ತಾ ಬಂದಿದ್ದೇವೆ. ಈ ಚಿತ್ರಕ್ಕೂ ಅದೇ ರೀತಿ ಮೆಚ್ಚುಗೆ ಸಿಗುತ್ತಿರುವುದು ಖುಷಿ ತಂದಿದೆ” ಎಂದಿದ್ದಾರೆ.

ತಾವೆಲ್ಲರೂ ಒಂದೇ ಚಿತ್ರರಂಗದವರಾಗಿದ್ದು, ಇಂತಹ ಗುಣಮಟ್ಟದ ಸಿನಿಮಾವೊಂದು ಪ್ರೇಕ್ಷಕರ ಮನಗೆದ್ದಿರುವುದಕ್ಕೆ ಇಡೀ ಚಿತ್ರರಂಗವೇ ಹೆಮ್ಮೆಪಡುವಂತಾಗಿದೆ ಎಂದು ಅಭಿಪ್ರಾಯಪಟ್ಟ ರಚಿತಾ ರಾಮ್, ಚಿತ್ರದ ನಿರ್ಮಾಪಕರು, ಸಂಗೀತ ನಿರ್ದೇಶಕರು, ಗೀತರಚನೆಕಾರರು ಸೇರಿದಂತೆ ತೆರೆಯ ಹಿಂದೆ ಕೆಲಸ ಮಾಡಿದ ಪ್ರತಿಯೊಬ್ಬ ತಂತ್ರಜ್ಞರಿಗೂ ಶುಭ ಕೋರಿದ್ದಾರೆ. ಜೊತೆಗೆ, ಮುಂದೆಯೂ ಇಂತಹ ಅರ್ಥಪೂರ್ಣ ಕಥೆಗಳುಳ್ಳ ಸಿನಿಮಾಗಳು ಇದೇ ತಂಡದಿಂದ ಮೂಡಿಬರಲಿ ಎಂದು ಹಾರೈಸಿದ್ದಾರೆ.

ShareTweetSendShare
Join us on:

Related Posts

parks-land-use-bill-withdrawn-bjp-victory-r-ashoka-seven-day-assembly

‘ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 8, 2026
0

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ....

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

by admin
October 8, 2026
0

  ಯಶ್ವಂತ್ ಕುಮಾರ್ ಮತ್ತು ಮಂದಾರ ಬತ್ತಲಹಳ್ಳಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ, ಸಚಿನ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸಮುದ್ರ ಮಂಥನ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸ್ಕಂದ...

bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

by admin
October 8, 2026
0

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಲಕ್ಷ್ಮೀ ಬಾರಮ್ಮ' ಮೂಲಕ ಮನೆಮಾತಾಗಿರುವ ನಟಿ ತನ್ವಿ ರಾವ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಭರ್ಜರಿ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳಿನ 'ರಾಧೇಶ್ಯಾಮ'...

jio-satellite-connectivity-1600-satellites-23-ground-stations-india-mobile-congress-2026

ನೆಲದಿಂದ ಆಕಾಶದವರೆಗೆ ಜಿಯೋ: 1,600 ಉಪಗ್ರಹ, 23 ಗ್ರೌಂಡ್ ಸ್ಟೇಷನ್‌ಗಳೊಂದಿಗೆ ಕನೆಕ್ಟಿವಿಟಿಯಲ್ಲಿ ಹೊಸ ಜಿಗಿತ

by admin
October 8, 2026
0

ನವದೆಹಲಿ,  ನೆಲದ ಮೇಲಿನ ಮೊಬೈಲ್ ನೆಟ್‌ವರ್ಕ್ ಮತ್ತು ಫೈಬರ್ ನಂತರ ಈಗ ಜಿಯೋ ತನ್ನ ಗಮನವನ್ನು ಬಾಹ್ಯಾಕಾಶದತ್ತ ಹರಿಸಿದೆ. ಕಂಪನಿಯು ಸುಮಾರು 1,600 ಉಪಗ್ರಹಗಳ ಪ್ರಸ್ತಾವಿತ ಕಾನ್ಸ್ಟೆಲೇಶನ್...

swiggy-instamart-quick-india-movement-sale-diwali-dussehra-discounts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ‘ಕ್ವಿಕ್ ಇಂಡಿಯಾ ಮೂವ್‌ಮೆಂಟ್’ ಸೇಲ್ ಆರಂಭ: ಐಫೋನ್, ಲ್ಯಾಪ್‌ಟಾಪ್, ದಿನಸಿ ಮೇಲೆ 50-90% ವರೆಗೆ ಬಂಪರ್ ರಿಯಾಯಿತಿ

by admin
October 8, 2026
0

ದೀಪಾವಳಿ ಮತ್ತು ದಸರಾ ಹಬ್ಬದ ಸೀಸನ್ ಶುರುವಾಗಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿದೆ. ಇನ್‌ಸ್ಟಾಮಾರ್ಟ್‌ನ ಬಹುನಿರೀಕ್ಷಿತ ಹಾಗೂ ಅತಿದೊಡ್ಡ ಸೇಲ್ 'ಕ್ವಿಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram