ಮುಂಬರುವ ಅಕ್ಟೋಬರ್ 23 ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಅವರು ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಎನ್ಡಿಎ (ಬಿಜೆಪಿ-ಜೆಡಿಎಸ್ ಮೈತ್ರಿಕೂಟದ) ಅಭ್ಯರ್ಥಿ ಶ್ರೀ ಎ.ಪಿ. ರಂಗನಾಥ್ ಅವರ ಪರವಾಗಿ ಭರ್ಜರಿ ಮತಯಾಚನೆ ಮಾಡಿದರು. ಪ್ರತಿಷ್ಠಿತ ದಯಾನಂದ ಸಾಗರ ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ ಶ್ರೀ ಆರ್. ಅಶೋಕ್ ಅವರು, ಶಿಕ್ಷಕರು ಮತ್ತು ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು. ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲು ಮತ್ತು ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಎನ್ಡಿಎ ಅಧಿಕೃತ ಅಭ್ಯರ್ಥಿಯಾದ ಎ.ಪಿ. ರಂಗನಾಥ್ ಅವರಿಗೆ ತಮ್ಮ “ಪ್ರಥಮ ಪ್ರಾಶಸ್ತ್ಯದ ಮತ” (First Preference Vote) ನೀಡಿ ಬೆಂಬಲಿಸುವಂತೆ ಅವರು ಶಿಕ್ಷಕ ಬಂಧುಗಳಲ್ಲಿ ಮನವಿ ಮಾಡಿದರು.
ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್ಐಆರ್ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಟಿಂಗ್ ಆಪರೇಶನ್ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಫ್ಐಆರ್ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ...








