ಚಿತ್ರಮಂದಿರಗಳಲ್ಲಿ ಬ್ಲಾಕ್ಬಸ್ಟರ್ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುತ್ತಾ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.
ಈ ಚಿತ್ರದ ಅಭೂತಪೂರ್ವ ಯಶಸ್ಸಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರತಂಡಕ್ಕೆ ಪ್ರೀತಿಯ ಶುಭ ಹಾರೈಸಿದ್ದಾರೆ.
‘ಪ್ರೇಮದ ಊರಲಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ತಪಸ್ವಿನಿ ಪೂಣಚ್ಚ ಅವರ ಅದ್ಭುತ ಅಭಿನಯ ಹಾಗೂ ಅವರಿಗೆ ಸಿಕ್ಕಿರುವ ಅಪಾರ ಯಶಸ್ಸನ್ನು ರಶ್ಮಿಕಾ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ನಟಿ ತಪಸ್ವಿನಿ ಪೂಣಚ್ಚ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರೂ ಮೂಲತಃ ಕೊಡಗಿನವರಾಗಿದ್ದು, ತಮ್ಮೂರಿನ ಪ್ರತಿಭೆಯ ಬೆಳವಣಿಗೆಗೆ ರಶ್ಮಿಕಾ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ‘ಪ್ರೇಮದ ಊರಲಿ’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರ ಬೆಂಬಲ ಮತ್ತು ಪ್ರೋತ್ಸಾಹ ಸಿಕ್ಕಿರುವುದು ಚಿತ್ರತಂಡಕ್ಕೆ ಮತ್ತಷ್ಟು ಆನೆಬಲ ತಂದಿದೆ.








