ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಶ್ರೀ ಶಶಿಲ್ ಜಿ. ನಮೋಶಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಎನ್ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟಿತ ಪ್ರಯತ್ನ ಹಾಗೂ ಶಿಕ್ಷಕ ಸಮುದಾಯ ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸಂದ ಜಯವಾಗಿದೆ.
ಈ ಐತಿಹಾಸಿಕ ಗೆಲುವಿಗಾಗಿ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳಿಗೆ ಅಭಿನಂದನೆಗಳು. ತಮ್ಮ ಅಮೂಲ್ಯ ಮತಗಳ ಮೂಲಕ ಬೆಂಬಲ ನೀಡಿದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
ಶಿಕ್ಷಕರ ಹಿತಾಸಕ್ತಿಗಳ ರಕ್ಷಣೆ ಹಾಗೂ ಶಿಕ್ಷಣ ಕ್ಷೇತ್ರದ ಪ್ರಗತಿಗಾಗಿ ಶ್ರೀ ಶಶಿಲ್ ಜಿ. ನಮೋಶಿ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸುತ್ತೇನೆ.







