ADVERTISEMENT
Monday, November 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸ್ಟಿಂಗ್ ಪ್ರಕರಣದಲ್ಲಿ ಬಯಲಾಯಿತು ದೆಹಲಿ ನಂಟು: ಇದು ಬರೀ ಟ್ರೇಲರ್, ಪಿಕ್ಚರ್ ಅಭಿ ಬಾಕಿ ಹೈ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ

Shwetha by Shwetha
November 2, 2026
in ರಾಜ್ಯ, Newsbeat, Politics, State, ರಾಜಕೀಯ
charchge-barada-bjp-eega-padayatre-priyank-kharge

charchge-barada-bjp-eega-padayatre-priyank-kharge

Share on FacebookShare on TwitterShare on WhatsappShare on Telegram

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಚರ್ಚಾಸ್ಪದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದ ನಂಟು ಬಯಲಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಈ ಸ್ಫೋಟಕ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸದ್ಯಕ್ಕೆ ಹೊರಬಂದಿರುವುದು ಅರ್ಧ ಸತ್ಯ ಮಾತ್ರ, ಇದು ಬರೀ ಟ್ರೇಲರ್ ಅಷ್ಟೇ, ಅಸಲಿ ಪಿಕ್ಚರ್ ಇನ್ನೂ ಬಾಕಿ ಇದೆ ಎಂದು ಮಾರ್ಮಿಕವಾಗಿ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಹಿಂದಿನ ಅಸಲಿ ಮುಖವಾಡಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಾದರೂ ಇದೆಯೇ ಎಂದು ಪ್ರಶ್ನಿಸುವ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡರು.

Related posts

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

November 2, 2026
ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಹಾಲಿನ ದರ ಏರಿಕೆ ಸಮರ್ಥಿಸಿಕೊಳ್ಳಲು ಹೋಗಿ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ: ಮೂರು ವರ್ಷದಲ್ಲಿ ನಾಲ್ಕು ಬಾರಿ ಬೆಲೆ ಏರಿಸಿದರೂ ಏಳೆಂಟು ವರ್ಷದಿಂದ ಏರಿಕೆಯೇ ಆಗಿಲ್ಲ ಎಂದ ಸಚಿವರ ವಿರುದ್ಧ ನೆಟ್ಟಿಗರ ಆಕ್ರೋಶ

November 2, 2026

ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಮತ್ತು ಇದಕ್ಕಾಗಿ ಎಲ್ಲಿಂದ ಹಣಕಾಸಿನ ನೆರವು ಹರಿದುಬಂದಿದೆ ಎಂಬ ಸಂಪೂರ್ಣ ಜಾತಕ ನಮ್ಮ ಕೈಯಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದರು. ತನಿಖೆಯ ವೇಳೆ ಪೊಲೀಸರಿಗೆ ಅತ್ಯಂತ ಮಹತ್ವದ ತಾಂತ್ರಿಕ ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಈ ಪ್ರಕರಣದಲ್ಲಿ ಈಗಾಗಲೇ ಸಿಕ್ಕಿಬಿದ್ದಿರುವ ಆರೇಳು ಮಂದಿ ಆರೋಪಿಗಳೆಲ್ಲರೂ ಕುಮಾರಸ್ವಾಮಿ ಅವರ ಅತ್ಯಂತ ನಿಕಟವರ್ತಿಗಳೇ ಆಗಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಬಲವಾದ ದಾಖಲೆಗಳಿವೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಕರಣ ಬೆಳಕಿಗೆ ಬಂದ ಆರಂಭದಲ್ಲಿ ಕುಮಾರಸ್ವಾಮಿ ಅವರು ಯಾವುದೇ ಆಧಾರವಿಲ್ಲದೆ ನಮ್ಮ ಸರ್ಕಾರದ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಜೆಡಿಎಸ್ ಕಾರ್ಯಕರ್ತರ ಹೆಸರು ತನಿಖೆಯಲ್ಲಿ ಕೇಳಿಬಂದಾಗ, ಅವರಿಗೆ ತನಿಖೆಗೆ ಸಹಕರಿಸುವಂತೆ ಸೂಚಿಸುವ ಬದಲು ಕುಮಾರಸ್ವಾಮಿ ಅವರು ಡಿಜಿ ಮತ್ತು ಐಜಿಪಿ ಕಚೇರಿಯವರೆಗೆ ಪಾದಯಾತ್ರೆ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದರು. ಈಗ ಅವರದ್ದೇ ನಿವಾಸದ ನಂಟು ಮತ್ತು ಅವರ ಜೊತೆಗಿದ್ದವರೇ ಸಿಕ್ಕಿಬಿದ್ದಿರುವಾಗ ಏನು ಉತ್ತರ ನೀಡುತ್ತಾರೆ? ಈಗ ಕೇವಲ ಅರ್ಧ ಸತ್ಯ ಮಾತ್ರ ಹೊರಬಂದಿದೆ, ತನಿಖೆ ಪೂರ್ಣಗೊಂಡು ಪೂರ್ತಿ ಸತ್ಯ ಬಯಲಾದರೆ ಇವರೆಲ್ಲ ಎಲ್ಲಿಗೆ ಹೋಗುತ್ತಾರೆ ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದರು.

ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರಿಗೆ ಒಂದು ಮಾತನ್ನು ಹೇಳುತ್ತಲೇ ಬಂದಿದ್ದೇನೆ. ತಾವು ಅಲಂಕರಿಸಿರುವ ಕೇಂದ್ರ ಸಚಿವ ಸ್ಥಾನದ ಘನತೆಯನ್ನು ಕಾಪಾಡಿಕೊಳ್ಳಬೇಕು. ಆದರೆ ಅವರು ತಮ್ಮ ಹುದ್ದೆಯ ಗೌರವವನ್ನು ಗಾಳಿಗೆ ತೂರಿ ಅತ್ಯಂತ ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ರಾಜಕೀಯ ವಿರೋಧಿಗಳನ್ನು ಹಣಿಯಲು ಇಂತಹ ಸ್ಟಿಂಗ್ ಆಪರೇಷನ್ ನಡೆಸಿರುವುದು ಅವರ ಹೊಲಸು ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಡರ್ಟಿ ಪೊಲಿಟಿಕ್ಸ್ ಅನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದ ಮತ್ತಷ್ಟು ರೋಚಕ ಸಂಗತಿಗಳು ಹೊರಬರಲಿವೆ, ಕಾದು ನೋಡುತ್ತಿರಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ShareTweetSendShare
Join us on:

Related Posts

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

by Shwetha
November 2, 2026
0

ಹಾಸನ: ಅಡುಗೆಯ ರುಚಿ ಮತ್ತು ಘಮ ಹೆಚ್ಚಿಸಲು ಒಗ್ಗರಣೆಗೆ ಬಳಸಿ, ಊಟ ಮಾಡುವಾಗ ಎತ್ತಿ ಆಚೆ ಬಿಸಾಡುವ ಕರಿಬೇವಿನ ಸೊಪ್ಪಿನಂತೆ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳೆಯರನ್ನು ನಡೆಸಿಕೊಳ್ಳಲಾಗುತ್ತಿದೆ...

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಹಾಲಿನ ದರ ಏರಿಕೆ ಸಮರ್ಥಿಸಿಕೊಳ್ಳಲು ಹೋಗಿ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ: ಮೂರು ವರ್ಷದಲ್ಲಿ ನಾಲ್ಕು ಬಾರಿ ಬೆಲೆ ಏರಿಸಿದರೂ ಏಳೆಂಟು ವರ್ಷದಿಂದ ಏರಿಕೆಯೇ ಆಗಿಲ್ಲ ಎಂದ ಸಚಿವರ ವಿರುದ್ಧ ನೆಟ್ಟಿಗರ ಆಕ್ರೋಶ

by Shwetha
November 2, 2026
0

ಶಿವಮೊಗ್ಗ: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಬರೋಬ್ಬರಿ 8 ರೂಪಾಯಿ ಹಾಗೂ ಮೊಸರಿನ ದರವನ್ನು 14 ರೂಪಾಯಿಗಳಷ್ಟು ಹೆಚ್ಚಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ...

ಹಾಲು, ಮೊಸರು ಆಯ್ತು ಈಗ ಬಸ್ ಟಿಕೆಟ್ ಸರದಿ: ನವೆಂಬರ್ 5ರಿಂದ ಪ್ರಯಾಣ ದರ ಏರಿಕೆ ಖಚಿತಪಡಿಸಿದ ಸಚಿವ ಬೈರತಿ ಸುರೇಶ್

ಹಾಲು, ಮೊಸರು ಆಯ್ತು ಈಗ ಬಸ್ ಟಿಕೆಟ್ ಸರದಿ: ನವೆಂಬರ್ 5ರಿಂದ ಪ್ರಯಾಣ ದರ ಏರಿಕೆ ಖಚಿತಪಡಿಸಿದ ಸಚಿವ ಬೈರತಿ ಸುರೇಶ್

by Shwetha
November 2, 2026
0

ಬೆಂಗಳೂರು: ಹಾಲು ಮತ್ತು ಮೊಸರಿನ ದರ ಏರಿಕೆಯ ಬಿಸಿಯಿಂದ ಇನ್ನೂ ಚೇತರಿಸಿಕೊಳ್ಳದ ರಾಜ್ಯದ ಜನಸಾಮಾನ್ಯರಿಗೆ ದೀಪಾವಳಿ ಹಬ್ಬದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಬೆಲೆ ಏರಿಕೆಯ ಆಘಾತ...

ಜ್ಞಾನೇಶ್ ಕುಮಾರ್ ಇಲ್ಲದಿದ್ದರೆ ಮೋದಿ ಪ್ರಧಾನಿ, ಶಾ ಗೃಹ ಸಚಿವರಾಗುತ್ತಿರಲಿಲ್ಲ: 2024ರ ಲೋಕಸಭಾ ಚುನಾವಣೆಯೇ ಅಕ್ರಮ-ಸಂವಿಧಾನ ರಕ್ಷಣೆಗೆ ಕೊನೆಯವರೆಗೂ ಹೋರಾಟ ಎಂದ ರಾಹುಲ್ ಗಾಂಧಿ

ಜ್ಞಾನೇಶ್ ಕುಮಾರ್ ಇಲ್ಲದಿದ್ದರೆ ಮೋದಿ ಪ್ರಧಾನಿ, ಶಾ ಗೃಹ ಸಚಿವರಾಗುತ್ತಿರಲಿಲ್ಲ: 2024ರ ಲೋಕಸಭಾ ಚುನಾವಣೆಯೇ ಅಕ್ರಮ-ಸಂವಿಧಾನ ರಕ್ಷಣೆಗೆ ಕೊನೆಯವರೆಗೂ ಹೋರಾಟ ಎಂದ ರಾಹುಲ್ ಗಾಂಧಿ

by Shwetha
November 2, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಮೈತ್ರಿಕೂಟದ ಬೃಹತ್ ಸಮಾವೇಶದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಹಾಗೂ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ಮೋದಿ, ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತರೇ ಪ್ರಮುಖ ಆರೋಪಿಗಳು ಎಂದ ಪ್ರಿಯಾಂಕ್ ಖರ್ಗೆ

by Shwetha
November 2, 2026
0

ಬೆಂಗಳೂರು: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿರುವ ಬೃಹತ್ ಅಕ್ರಮಗಳಿಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram