ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಸೋಂಕು ಶರವೇಗದಲ್ಲಿ ಹರಡುತ್ತಿದ್ದು, ಪ್ರತಿದಿನ ನೂರಾರು ಜನರನ್ನು ಬಲಿ ಪಡೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿ.ಎಸ್ ನೇತೃತ್ವದ ಸರ್ಕಾರ ಹರಸಾಹಸ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿÀು ಸಚಿವರಲ್ಲಿ ಸಮನ್ವಯತೆ ಕೊರತೆ ಕಾಣದ ಹಿನ್ನೆಲೆಯಲ್ಲಿ ಗರಂ ಆಗಿದ್ದಾರೆ ಎನ್ನಲಾಗಿದೆ.
ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಕೊರೊನಾ ನಿಯಂತ್ರಣದಲ್ಲಿ ನೀವು ಮಾಡುತ್ತಿರುವ ಕೆಲಸ ನನಗೆ ತೃಪ್ತಿ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ತಮ್ಮ ಸಂಪುಟದ ಸಚಿವರಲ್ಲಿ ಸಮನ್ವಯತೆ ಕಾಪಾಡಿಕೊಳ್ಳುವಂತೆ ಖಡಕ್ಕಾಗಿ ನೀವು ಸೂಚನೆ ನೀಡಿ ಎಂದು ನಿರ್ದೇಶನ ನೀಡಿದ್ದಾರೆ.
ಒಂದು ಕಡೆ, ಕೊರೊನಾ ನಿಯಂತ್ರಣಕ್ಕೆ ಒದ್ದಾಡುತ್ತಿರುವ ಬಿಎಸ್‍ವೈಗೆ ಹೈಕಮಾಂಡ್ ನಿರ್ದೇಶನ ನೀಡಿರುವುದು ತಲೆ ನೋವಾಗಿ ಪರಿಂನಿಸಿದೆ. ಸಮನ್ವಯತೆ ಕಾಪಾಡಿಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಕಾದಿದೆಯಾ ಆಪತ್ತು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








