ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನೆ ಸಾಧ್ಯ : ಎಸ್.ಪಿ ಸಂಸದ
ಸಂಭಾಲ್ : ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಕೊರೊನಾ ವೈರಸ್ ನಿರ್ಮೂಲನೆ ಸಾಧ್ಯ ಎಂದು ಸಮಾಜವಾದಿ ಪಾರ್ಟಿಯ ಸಂಸದ ಡಾ. ಶಫಿಕುರ್ ರಹಮಾನ್ ಬರ್ಕ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಉತ್ತರಪ್ರದೇಶದಲ್ಲಿ ಕೊರೊನಾ ವೈರಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈದ್ ಉಲ್ ಜುಹಾ ಸಂದರ್ಭದಲ್ಲಿ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಯನ್ನು ನಿಷೇಧಿಸಲಾಗಿದೆ. ಮಸೀದಿಗಳಲ್ಲಿ ಕೇವಲ 5 ಜನರಿಗೆ ನಮಾಜ್ ಸಲ್ಲಿಸಲು ಅನುಮತಿ ನೀಡಲಾಗಿದೆ. ಇದರ ವಿರುದ್ಧ ಮಾತನಾಡಿರುವ ಬರ್ಕ್, ಈ ರೀತಿ ನಿಷೇಧ ಹೇರಿರುವುದು ಸರಿಯಿಲ್ಲ. ಮಸೀದಿ ಮತ್ತು ಈದ್ಗಾಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿರುವುದರ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಸರ್ಕಾರ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಒಂದು ಹೆಜ್ಜೆ ಮುಂದೆ ಹೋಗಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರೆ ಮಾತ್ರ ಕೊರೊನಾ ನಿರ್ಮೂಲನೆ ಮಾಡಲು ಸಾಧ್ಯ. ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಯಿಂದ ಮಾತ್ರ ದೇಶ ಉಳಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ.








