ಮೈಸೂರು : ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿದ್ದ ಹಿನ್ನೆಲೆ ತಲೆಮರೆಸಿಕೊಂಡಿದ್ದ ಪ್ರತಾಪ್ ರನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದು, ಬೆಂಗಳೂರಿಗೆ ಕರೆ ತರುತ್ತಿದ್ದಾರೆ.
ಹೈದರಾಬಾದ್ ನಿಂದ ಆಗಮಿಸಿದ್ದ ಡ್ರೋನ್ ಪ್ರತಾಪ್‌ನನ್ನು ಬಿಬಿಎಂಪಿ ಬೆಂಗಳೂರಿನ ತಲಘಟ್ಟಪುರದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಕ್ವಾರಂಟೈನ್ ನಲ್ಲಿರಲು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆತನ ಕೈ ಮೇಲೆ ಕ್ವಾರಂಟೈನ್ ಸೀಲ್ ಹಾಕಲಾಗಿತ್ತು.
ಆದರೂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಆತ ಖಾಸಗಿ ಸುದ್ದಿವಾಹಿನಿಯ ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಜತೆಗೆ ತಲೆಮರೆಸಿಕೊಂಡಿದ್ದರಿAದ ಆತನ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ಡ್ರೋನ್ ಪ್ರತಾಪ್ ಬಂಧನಕ್ಕೆ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
ಆತ ಮೈಸೂರಿನಲ್ಲಿದ್ದ ಮಾಹಿತಿ ಮೇರೆಗೆ ತಲಘಟ್ಟಪುರ ಪೊಲೀಸರ ತಂಡ, ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದೆ.