ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

Shwetha by Shwetha
November 26, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ನೀಡಿರುವ ಹೇಳಿಕೆ ಇದೀಗ ಮೈತ್ರಿ ಪಾಳಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ರೇವಣ್ಣ ಅವರ ಈ ಏಕಪಕ್ಷೀಯ ಘೋಷಣೆಯು ಬಿಜೆಪಿ ಪಾಳಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಸೂಕ್ಷ್ಮ ವಿಚಾರದಲ್ಲಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡದೆ ಅತ್ಯಂತ ಎಚ್ಚರಿಕೆಯ ಹೆಜ್ಜೆ ಇಡಲು ಕಮಲ ನಾಯಕರು ನಿರ್ಧರಿಸಿದ್ದಾರೆ. ಮತ್ತೊಂದೆಡೆ, ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಈ ಹೇಳಿಕೆಗೆ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.

ಮೈತ್ರಿಯಲ್ಲಿ ಜೆಡಿಎಸ್ ಪ್ರಾಬಲ್ಯದ ಸಂದೇಶ? ಮೌನಕ್ಕೆ ಶರಣಾದ ಬಿಜೆಪಿ ನಾಯಕರು

Related posts

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

November 26, 2026
ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಆದೇಶ

ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಆದೇಶ

November 26, 2026

ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ನೀಡಿರುವ ಈ ಅನಿರೀಕ್ಷಿತ ಹೇಳಿಕೆಯು ಮೈತ್ರಿಕೂಟದಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆಯುತ್ತಿರುವುದರ ದ್ಯೋತಕ ಎಂಬ ವಿಶ್ಲೇಷಣೆಗಳು ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿವೆ. ಆದರೆ, ಮೈತ್ರಿ ಧರ್ಮಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಈ ಕುರಿತು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೆ ನೀಡಬಾರದು ಹಾಗೂ ತಮ್ಮ ಅಭಿಪ್ರಾಯ ಅಥವಾ ಪ್ರತಿಕ್ರಿಯೆಯನ್ನು ಎಲ್ಲಿ ನೀಡಬೇಕೋ ಅಲ್ಲಿಯೇ ಸೂಕ್ತ ವೇದಿಕೆಯಲ್ಲಿ ವ್ಯಕ್ತಪಡಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆ ಬಿಜೆಪಿ ರಾಜ್ಯ ಘಟಕದಿಂದ ನಾಯಕರಿಗೆ ರವಾನೆಯಾಗಿದೆ. ಇದರ ಪರಿಣಾಮವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೂಡ ಈ ಕುರಿತು ಪ್ರತಿಕ್ರಿಯೆ ನೀಡಲು ಸ್ಪಷ್ಟವಾಗಿ ನಿರಾಕರಿಸಿದ್ದು, ಬಿಜೆಪಿಯ ಇತರ ಯಾವುದೇ ನಾಯಕರೂ ಈ ಬಗ್ಗೆ ತುಟಿಬಿಚ್ಚಿಲ್ಲ.

ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ: ಸಹೋದರನ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ

ಮತ್ತೊಂದೆಡೆ, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಾಗ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂಬ ರೇವಣ್ಣ ಅವರ ಹೇಳಿಕೆಗೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಅದು ರೇವಣ್ಣ ಅವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದರು ಎಂಬಂತೆ ಈ ವಿಚಾರ ಆಗಬಾರದು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಮೊದಲಿಗೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದ್ದು, ನಮ್ಮ ಕೆಲಸವನ್ನು ರಾಜ್ಯದ ಜನರು ಒಪ್ಪಿಕೊಳ್ಳಬೇಕು. ಆ ನಂತರ ಬಿಜೆಪಿ ಹೈಕಮಾಂಡ್ ಹಾಗೂ ನಾವು ಒಟ್ಟಿಗೆ ಕುಳಿತು ಚರ್ಚೆ ನಡೆಸುತ್ತೇವೆ, ಆಮೇಲೆ ಏನಾಗುತ್ತದೆಯೋ ನೋಡೋಣ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಹಿರಿಯೂರು ಟಿಕೆಟ್ ವಿಚಾರದಲ್ಲಿ ಪ್ರತಿಷ್ಠೆ ಇಲ್ಲ: ನ.26ರ ಸಭೆಯಲ್ಲಿ ಅಂತಿಮ ಚರ್ಚೆ

ಇದೇ ವೇಳೆ, ತೀವ್ರ ಕುತೂಹಲ ಕೆರಳಿಸಿರುವ ಹಿರಿಯೂರು ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿದ ಕುಮಾರಸ್ವಾಮಿ, ಈ ವಿಚಾರದಲ್ಲಿ ತಮಗೆ ಯಾವುದೇ ರೀತಿಯ ಪ್ರತಿಷ್ಠೆ ಇಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಇಂದು ನಡೆಯಲಿರುವ ಸಮನ್ವಯ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚೆ ನಡೆಸುತ್ತೇವೆ. ಕ್ಷೇತ್ರದಲ್ಲಿ ಯಾರ ಪರವಾಗಿ ಜನರ ಒಲವು ಇದೆಯೋ ಅಂತಹವರಿಗೆ ಟಿಕೆಟ್ ಕೊಡಿ ಎಂದು ನಾನು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಮತ್ತು ಮುಂದೆಯೂ ಹೇಳುತ್ತೇನೆ. ನವೆಂಬರ್ 26ರ ಸಭೆಯಲ್ಲೂ ನಾನು ಇದೇ ನಿಲುವನ್ನು ಪ್ರತಿಪಾದಿಸುತ್ತೇನೆ ಎಂದು ಕುಮಾರಸ್ವಾಮಿ ಖಚಿತಪಡಿಸಿದರು.

ShareTweetSendShare
Join us on:

Related Posts

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

by Shwetha
November 26, 2026
0

ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಗದಿತ ಗೌರವಧನ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೀದಿಗಿಳಿದು...

ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಆದೇಶ

ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಆದೇಶ

by Shwetha
November 26, 2026
0

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ ಶಿಕ್ಷೆ...

ಇನ್ನು 5ರಿಂದ 10 ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ: ಕೇವಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಸಾಲದು, ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಮದ್ದು- ಬಾಲಚಂದ್ರ ಜಾರಕಿಹೊಳಿ

ಇನ್ನು 5ರಿಂದ 10 ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ: ಕೇವಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಸಾಲದು, ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಮದ್ದು- ಬಾಲಚಂದ್ರ ಜಾರಕಿಹೊಳಿ

by Shwetha
November 26, 2026
0

ಬೆಳಗಾವಿ: ದಶಕಗಳ ಕಾಲದಿಂದಲೂ ಆಗಾಗ್ಗೆ ಮುನ್ನೆಲೆಗೆ ಬರುತ್ತಿರುವ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗಿಗೆ ಇದೀಗ ಭಾರತೀಯ ಜನತಾ ಪಕ್ಷದ (ಬಿಜೆಪಿ) ಒಳಗಿನಿಂದಲೇ ಮತ್ತೆ ಹೊಸ ಬಲ...

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಮೊಬೈಲ್, ಧ್ವನಿ ಮಾದರಿ ಎಫ್‌ಎಸ್‌ಎಲ್‌ಗೆ

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಮೊಬೈಲ್, ಧ್ವನಿ ಮಾದರಿ ಎಫ್‌ಎಸ್‌ಎಲ್‌ಗೆ

by Shwetha
November 26, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ...

ಮೋದಿ ತೇಜಸ್ಸಿನ ಮುಂದೆ ಸೂರ್ಯನ ಬೆಳಕೂ ಮಂದ: ಪ್ರಧಾನಿಯನ್ನು ಹಾಡಿ ಹೊಗಳಿದ ಕಟ್ಟಾ ವಿರೋಧಿ ಜಿರಳೆ ದೀಪ್ಕೆ! ಈ ದಿಢೀರ್ ಜಪದ ಅಸಲಿ ರಹಸ್ಯವೇನು?

ಮೋದಿ ತೇಜಸ್ಸಿನ ಮುಂದೆ ಸೂರ್ಯನ ಬೆಳಕೂ ಮಂದ: ಪ್ರಧಾನಿಯನ್ನು ಹಾಡಿ ಹೊಗಳಿದ ಕಟ್ಟಾ ವಿರೋಧಿ ಜಿರಳೆ ದೀಪ್ಕೆ! ಈ ದಿಢೀರ್ ಜಪದ ಅಸಲಿ ರಹಸ್ಯವೇನು?

by Shwetha
November 26, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯಂಥ ವ್ಯಕ್ತಿ ಅಧಿಕಾರದಲ್ಲಿದ್ದರೆ ಮಾತ್ರ ದೇಶದ ಕಲ್ಯಾಣ ಸಾಧ್ಯ, ಮೋದಿ ಇದ್ದರೆ ಎಲ್ಲವೂ ಸಾಧ್ಯ (ಮೋದಿ ಹೈ ತೋ ಮುಮ್‌ಕಿನ್ ಹೈ). ಮೋದಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram