ADVERTISEMENT
Wednesday, November 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವೈಟ್‌ಟಾಪಿಂಗ್ ವೆಚ್ಚ ಮೂರು ಪಟ್ಟು ಹೆಚ್ಚಳ: ಕಮಿಷನ್ ಲೂಟಿಗೆ ಕಾಂಗ್ರೆಸ್‌ ಸರ್ಕಾರದ ಸ್ಕೆಚ್‌?

admin by admin
November 25, 2026
in Newsbeat, State, ರಾಜ್ಯ
bjp-alleges-threefold-hike-in-bengaluru-whitetopping-cost-2321-crore-cabinet-approval

bjp-alleges-threefold-hike-in-bengaluru-whitetopping-cost-2321-crore-cabinet-approval

Share on FacebookShare on TwitterShare on WhatsappShare on Telegram

130.85 ಕಿ.ಮೀ. ರಸ್ತೆ ಅಭಿವೃದ್ಧಿಗೆ ₹2,321 ಕೋಟಿ ವೆಚ್ಚಕ್ಕೆ ಸಂಪುಟ ಅಸ್ತು; ಪ್ರತಿ ಕಿ.ಮೀ.ಗೆ ₹17.74 ಕೋಟಿ ಖರ್ಚು ಮಾಡಲು ನಿರ್ಧಾರ

ಬೆಂಗಳೂರು: ಬೆಂಗಳೂರಿನ ರಸ್ತೆಗಳಿಗೆ ವೈಟ್‌ಟಾಪಿಂಗ್‌ ಮಾಡುವ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಸಾರ್ವಜನಿಕರ ತೆರಿಗೆ ಹಣವನ್ನು ದುಂದುವೆಚ್ಚ ಮಾಡಲು ಹೊರಟಿದೆ ಎಂದು ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

Related posts

r-ashoka-slams-govt-over-asha-workers-protest-demands-apology-from-minister-narendraswamy-bengaluru

ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಶ್ರಮಕ್ಕೆ ತಕ್ಕ ಗೌರವಧನ: ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

November 25, 2026
r-ashoka-inspects-banashankari-referral-hospital-construction-work-bengaluru

ಬನಶಂಕರಿ ರೆಫರಲ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಆರ್‌. ಅಶೋಕ್

November 25, 2026

ಮಾರ್ಚ್‌ ತಿಂಗಳ ಬಜೆಟ್‌ನಲ್ಲಿ ಪ್ರತಿ ಕಿ.ಮೀ.ಗೆ ಸರಾಸರಿ ₹6.66 ಕೋಟಿ ವೆಚ್ಚದಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ನಡೆಸುವುದಾಗಿ ಘೋಷಿಸಿದ್ದ ಸರ್ಕಾರ, ಇದೀಗ ಕೇವಲ 130.85 ಕಿ.ಮೀ. ರಸ್ತೆ ಅಭಿವೃದ್ಧಿಗೆ ₹2,321.17 ಕೋಟಿ ವೆಚ್ಚ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಅಂದರೆ ಪ್ರತಿ ಕಿ.ಮೀ.ಗೆ ಸರಾಸರಿ ₹17.74 ಕೋಟಿ ವೆಚ್ಚವಾಗಲಿದ್ದು, ಆರಂಭದಲ್ಲಿ ಘೋಷಿಸಿದ್ದ ಅಂದಾಜಿಗಿಂತ ಸುಮಾರು ಮೂರು ಪಟ್ಟು ಹೆಚ್ಚಿನ ಮೊತ್ತ ನಿಗದಿಪಡಿಸಲಾಗಿದೆ.

ಈ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಕಮಿಷನ್‌ ಮತ್ತು ಲೂಟಿಗೆ ಅವಕಾಶ ಮಾಡಿಕೊಡುವ ಹುನ್ನಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

ಕೇವಲ 88 ರಸ್ತೆಗಳಲ್ಲಿ 130.85 ಕಿ.ಮೀ. ವೈಟ್‌ಟಾಪಿಂಗ್‌ ಕಾಮಗಾರಿಗಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ರಸ್ತೆ ಕಾಮಗಾರಿಗಳ ಗುಣಮಟ್ಟ ಮತ್ತು ವೆಚ್ಚದ ಸಮರ್ಥನೆಗಿಂತ ಗುತ್ತಿಗೆದಾರರ ಹಿತಾಸಕ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆಯೇ ಎಂಬ ಪ್ರಶ್ನೆಯನ್ನೂ ಬಿಜೆಪಿ ಮುಂದಿಟ್ಟಿದೆ.

ಒಂದೆಡೆ ಬಡವರು, ಮಹಿಳೆಯರು ಹಾಗೂ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆರ್ಥಿಕ ಸಂಕಷ್ಟದ ನೆಪ ಹೇಳುವ ಸರ್ಕಾರ, ಮತ್ತೊಂದೆಡೆ ಬೆಂಗಳೂರಿನ ರಸ್ತೆ ಕಾಮಗಾರಿಗಳಿಗಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿರುವುದು ದ್ವಂದ್ವ ನೀತಿಗೆ ಸಾಕ್ಷಿ ಎಂದು ಟೀಕಿಸಿದೆ.

ಬೆಂಗಳೂರಿನ ಜನರು ಕಷ್ಟಪಟ್ಟು ದುಡಿದು ಪಾವತಿಸುವ ತೆರಿಗೆ ಹಣದ ಬಳಕೆಯಲ್ಲಿ ಸರ್ಕಾರ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ವೈಟ್‌ಟಾಪಿಂಗ್‌ ಯೋಜನೆಯ ವೆಚ್ಚ ಮೂರು ಪಟ್ಟು ಹೆಚ್ಚಾಗಿರುವುದಕ್ಕೆ ಸ್ಪಷ್ಟ ಕಾರಣ ನೀಡಬೇಕು. ಕಾಮಗಾರಿಗಳ ಅಂದಾಜು ವೆಚ್ಚ, ಟೆಂಡರ್‌ ಪ್ರಕ್ರಿಯೆ ಹಾಗೂ ಗುತ್ತಿಗೆದಾರರ ಆಯ್ಕೆ ಸೇರಿದಂತೆ ಎಲ್ಲ ವಿವರಗಳನ್ನು ಸಾರ್ವಜನಿಕರ ಮುಂದಿಡಬೇಕು. ದುಬಾರಿ ವೆಚ್ಚದ ಈ ಯೋಜನೆಯನ್ನು ತಕ್ಷಣ ಮರುಪರಿಶೀಲಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ShareTweetSendShare
Join us on:

Related Posts

r-ashoka-slams-govt-over-asha-workers-protest-demands-apology-from-minister-narendraswamy-bengaluru

ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಶ್ರಮಕ್ಕೆ ತಕ್ಕ ಗೌರವಧನ: ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

8ನೇ ದಿನವೂ ಮುಂದುವರಿದ ಅಹೋರಾತ್ರಿ ಧರಣಿ; ಸಚಿವ ನರೇಂದ್ರಸ್ವಾಮಿ ಹೇಳಿಕೆಗೆ ಆಕ್ರೋಶ, ಆಶಾ ಕಾರ್ಯಕರ್ತೆಯರ ಕ್ಷಮೆಯಾಚನೆಗೆ ಆಗ್ರಹ ಬೆಂಗಳೂರು: ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಹಗಲಿರುಳು ಜನರ...

r-ashoka-inspects-banashankari-referral-hospital-construction-work-bengaluru

ಬನಶಂಕರಿ ರೆಫರಲ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಆರ್‌. ಅಶೋಕ್

by admin
November 25, 2026
0

ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ; ಗುಣಮಟ್ಟದಲ್ಲಿ ರಾಜಿಯಾಗದಂತೆ ಅಧಿಕಾರಿಗಳಿಗೆ ಸೂಚನೆ ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಅವರು ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ...

r-ashoka-slams-congress-govt-over-asha-workers-protest-demands-480-crore-allocation-bengaluru

ಕಾಂಗ್ರೆಸ್ ಕಾರ್ಯಕರ್ತರ ಗಂಜಿ ಕೇಂದ್ರಕ್ಕೆ 2,000 ಕೋಟಿ, ಆಶಾ ಕಾರ್ಯಕರ್ತೆಯರಿಗೆ 480 ಕೋಟಿ ರೂ. ನೀಡಲು ಆಗಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ

by admin
November 25, 2026
0

ಬೆಂಗಳೂರು,  ಕಾಂಗ್ರೆಸ್ ಕಾರ್ಯಕರ್ತರ ಗಂಜಿ ಕೇಂದ್ರಕ್ಕೆ ಸುಮಾರು 2,000 ಕೋಟಿ ರೂ. ಖರ್ಚು ಮಾಡುವ ಸರ್ಕಾರ, ಆಶಾ ಕಾರ್ಯಕರ್ತೆಯರಿಗೆ 480 ಕೋಟಿ ರೂ. ನೀಡಲು ಮುಂದಾಗುತ್ತಿಲ್ಲ ಎಂದು ಪ್ರತಿಪಕ್ಷ...

wadhwani-grants-3-to-5-years-funding-for-startups-msme-skill-training-institutes-how-to-apply

ಸ್ಟಾರ್ಟಪ್, ಎಂಎಸ್‌ಎಂಇ, ಕೌಶಲ್ಯ ತರಬೇತಿ ಸಂಸ್ಥೆಗಳಿಗೆ 3 – 5 ವರ್ಷ ಅನುದಾನ: ಅರ್ಜಿ ಸಲ್ಲಿಸುವುದು ಹೇಗೆ?

by admin
November 25, 2026
0

ಬೆಂಗಳೂರು: ದೇಶದಲ್ಲಿ ಉದ್ಯೋಗ ಸೃಷ್ಟಿ, ಕೌಶಲ್ಯ ತರಬೇತಿ ಮತ್ತು ಜನರ ಆದಾಯ ಹೆಚ್ಚಿಸುವ ಕೆಲಸ ಮಾಡುತ್ತಿರುವ ಸಂಸ್ಥೆಗಳಿಗೆ ನೆರವಾಗಲು ‘ವಾಧ್ವಾನಿ ಫೌಂಡೇಶನ್’ ಮುಂದಾಗಿದ್ದು, ‘ವಾಧ್ವಾನಿ ಗ್ರ್ಯಾಂಟ್ಸ್’ ಯೋಜನೆಯಡಿ...

karnataka-rajyotsava-cup-2026-season-2-cricket-tournament-doha-qatar-ksq-karnataka-royals

ದೋಹಾದಲ್ಲಿ ‘ಕರ್ನಾಟಕ ರಾಜ್ಯೋತ್ಸವ ಕಪ್ 2026 (ಸೀಸನ್ 2)’ ಕ್ರಿಕೆಟ್ ಪಂದ್ಯಾವಳಿಗೆ ಭರ್ಜರಿ ಚಾಲನೆ

by admin
November 25, 2026
0

ದೋಹಾ, ಕತಾರ್: ಭಾರತೀಯ ರಾಯಭಾರಿ ಕಚೇರಿಯ ಅಧೀನದ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಸಹಯೋಗಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ (KSQ) ಹಾಗೂ ಕರ್ನಾಟಕ ರಾಯಲ್ಸ್ ಜಂಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram