ಮಂಗಳೂರು: ಕೇಂದ್ರದ ಮಾಜಿ ಸಚಿವ 83 ಹರೆಯದ ಜನಾರ್ದನ ಪೂಜಾರಿ ಕೊರೊನಾ ಗೆದ್ದು ಬಂದಿದ್ದಾರೆ. ಜುಲೈ4ರಂದು ಜನಾರ್ದನ ಪೂಜಾರಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಜನಾರ್ದನ ಪೂಜಾರಿ ಚಿಕಿತ್ಸೆಗೆ ದಾಖಲಾಗಿದ್ದರು.
ಮೊದಲು ಪೂಜಾರಿ ಜೊತೆಗೆ ಮನೆಯ ಇಬ್ಬರು ಸದಸ್ಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಮನೆಯ ಕೆಲಸದವರಿಂದ ಕುಟುಂಬದ ಸದಸ್ಯರಿಗೂ ಸೋಂಕು ಹರಡಿತ್ತು. ಇಂದು ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಜನಾರ್ದನ ಪೂಜಾರಿ ಅವರು ಬಂಟ್ವಾಳದಲ್ಲಿರುವ ನಿವಾಸಕ್ಕೆ ವಾಪಸ್ ಆಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಪೂಜಾರಿ, ದೇವರ ಅನುಗ್ರಹ, ನಿಮ್ಮೆಲ್ಲರ ಹಾರೈಕೆಯಿಂದ ಗುಣಮುನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ನನ್ನ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲಾ ಬಂಧುಗಳಿಗೆ, ಹಿತೈಷಿಗಳಿಗೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರು ಸೇರಿದಂತೆ ಕೊರೊನಾ ವಾರಿಯರ್ಸ್ಗೆ ಧನ್ಯವಾದ ತಿಳಿಸಿದ್ದಾರೆ.
ಕೊರೊನಾ ರೋಗಕ್ಕೆ ಯಾರೂ ಭಯ ಪಡಬೇಕಾಗಿಲ್ಲ. ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ. ಪ್ರತಿಯೊಬ್ಬರೂ ಜಾಗ್ರತೆ ವಹಿಸಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜನಾರ್ದನ ಪೂಜಾರಿ ಮನವಿ ಮಾಡಿದ್ದಾರೆ.
Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!
ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....








