ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತ ಕಾಯುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ಆರ್‌. ಅಶೋಕ್ ವಾಗ್ದಾಳಿ

admin by admin
November 26, 2026
in Newsbeat, State, ರಾಜ್ಯ
r-ashoka-slams-congress-govt-over-cwma-order-to-release-cauvery-water-to-tamil-nadu

r-ashoka-slams-congress-govt-over-cwma-order-to-release-cauvery-water-to-tamil-nadu

Share on FacebookShare on TwitterShare on WhatsappShare on Telegram

ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWMA ಸೂಚನೆ; ರಾಜ್ಯದ ವಾಸ್ತವ ಪರಿಸ್ಥಿತಿ ಮಂಡಿಸುವಲ್ಲಿ ಸರ್ಕಾರ ಎಡವಿದೆ ಎಂದು ಟೀಕೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿರುವ ನಡುವೆಯೇ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 2,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿರುವುದಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಅನ್ನಭಾಗ್ಯಕ್ಕಿಲ್ಲ ಸರ್ವರ್ ಗ್ಯಾರಂಟಿ; ಬಡವರ ಹೊಟ್ಟೆಗೆ ಹೊಡೆಯುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌. ಅಶೋಕ್ ವಾಗ್ದಾಳಿ

November 26, 2026
criticism-over-minister-ut-khader-statement-on-asha-workers-protest-demand-for-resignation-apology

ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ ಎನ್ನುವ ಖಾದರ್‌ ಅವರೇ, ರಾಜೀನಾಮೆ ಕೊಟ್ಟುಬಿಡಿ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

November 26, 2026

ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ. ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸುವಲ್ಲಿ ಸರ್ಕಾರ ಎಡವಿದೆ ಎಂದು ಅವರು ಟೀಕಿಸಿದ್ದಾರೆ.

ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಆತಂಕವಿದೆ. ರೈತರ ಬೆಳೆಗಳು ಒಣಗುತ್ತಿವೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಪ್ರಾಧಿಕಾರದ ಸಭೆಗೆ ರಾಜ್ಯದ ಪ್ರತಿನಿಧಿಗಳು ಖುದ್ದಾಗಿ ಹಾಜರಾಗಿ ರಾಜ್ಯದ ಸಂಕಷ್ಟವನ್ನು ಪರಿಣಾಮಕಾರಿಯಾಗಿ ಮಂಡಿಸಬೇಕಿತ್ತು. ಆದರೆ, ವಿಡಿಯೋ ಕಾನ್ಫರೆನ್ಸ್‌ ಮೂಲಕ ಕಾಟಾಚಾರಕ್ಕೆ ಭಾಗವಹಿಸಿ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಆರ್‌. ಅಶೋಕ್ ಆರೋಪಿಸಿದ್ದಾರೆ.

ನಮ್ಮ ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಕುಡಿಯುವ ನೀರಿನ ಅಗತ್ಯ, ರೈತರ ಸಂಕಷ್ಟ ಹಾಗೂ ಬರಗಾಲದ ತೀವ್ರತೆಯನ್ನು ಪ್ರಾಧಿಕಾರದ ಮುಂದೆ ಗಟ್ಟಿಯಾಗಿ ಪ್ರತಿಪಾದಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸಲು ಅಗತ್ಯವಾದ ಕಾನೂನು ಮತ್ತು ತಾಂತ್ರಿಕ ವಾದಗಳನ್ನು ಸಮರ್ಥವಾಗಿ ಮಂಡಿಸಬೇಕಾದ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿನ ಟಿವಿಕೆ ಸರ್ಕಾರದ ರಾಜಕೀಯ ಒತ್ತಡಕ್ಕೆ ಮಣಿದು, ಮೈತ್ರಿಕೂಟದ ಹಿತಾಸಕ್ತಿಗಾಗಿ ಕರ್ನಾಟಕದ ರೈತರ ಬದುಕನ್ನು ಬಲಿಕೊಡಲಾಗುತ್ತಿದೆಯೇ? ಕಾವೇರಿ ವಿಚಾರದಲ್ಲಿ ಪದೇಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ರಾಜ್ಯದ ಹಿತಾಸಕ್ತಿ ಕಾಪಾಡಲು ಏಕೆ ವಿಫಲರಾಗುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕನ್ನಡಿಗರ ಹಿತಾಸಕ್ತಿ ಮತ್ತು ರೈತರ ಬದುಕನ್ನು ರಕ್ಷಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಕೂಡಲೇ ನಾಡಿನ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು ಎಂದು ಆರ್‌. ಅಶೋಕ್ ಆಗ್ರಹಿಸಿದ್ದಾರೆ.

ಕನ್ನಡಿಗರ ಕುಡಿಯುವ ನೀರಿನ ಹಕ್ಕು ಮತ್ತು ರೈತರ ಬದುಕಿನ ಪ್ರಶ್ನೆಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ನಾಡಿನ ಹಿತಾಸಕ್ತಿಯನ್ನು ಕಾಪಾಡಲು ಯೋಗ್ಯತೆಯಿಲ್ಲದ ಕಾಂಗ್ರೆಸ್‌ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸುವ ದಿನ ದೂರವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ShareTweetSendShare
Join us on:

Related Posts

ಅನ್ನಭಾಗ್ಯಕ್ಕಿಲ್ಲ ಸರ್ವರ್ ಗ್ಯಾರಂಟಿ; ಬಡವರ ಹೊಟ್ಟೆಗೆ ಹೊಡೆಯುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌. ಅಶೋಕ್ ವಾಗ್ದಾಳಿ

by admin
November 26, 2026
0

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ; ತಿಂಗಳು ಮುಗಿಯುತ್ತ ಬಂದರೂ ಶೇ.50ರಷ್ಟು ರೇಷನ್ ವಿತರಣೆ ಬಾಕಿ ಎಂದು ಆರೋಪ ಬೆಂಗಳೂರು: ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಯ...

criticism-over-minister-ut-khader-statement-on-asha-workers-protest-demand-for-resignation-apology

ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ ಎನ್ನುವ ಖಾದರ್‌ ಅವರೇ, ರಾಜೀನಾಮೆ ಕೊಟ್ಟುಬಿಡಿ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

by admin
November 26, 2026
0

ಆಶಾ ಕಾರ್ಯಕರ್ತೆಯರ ಶ್ರಮವನ್ನು ಹಗುರವಾಗಿ ಕಂಡ ಸಚಿವರ ಹೇಳಿಕೆಗೆ ಆಕ್ರೋಶ; ಕ್ಷಮೆಯಾಚಿಸಿ, ಬೇಡಿಕೆ ಈಡೇರಿಸುವಂತೆ ಆಗ್ರಹ ಬೆಂಗಳೂರು: ಆಶಾ ಕಾರ್ಯಕರ್ತೆಯರ ಶ್ರಮ, ತ್ಯಾಗ ಮತ್ತು ಹೋರಾಟವನ್ನು ಹಗುರವಾಗಿ...

r-ashoka-slams-congress-govt-over-remarks-on-asha-workers-bjp-jds-protest-december-2-session

ಆಶಾ ಕಾರ್ಯಕರ್ತೆಯರಿಗೆ ಅವಮಾನಿಸುವ ದುರಹಂಕಾರದ ಮಾತುಗಳು: ಇದು ಜನರಿಗೆ ವಂಚನೆ ಮಾಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ

by admin
November 26, 2026
0

ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸುವ ಯೋಗ್ಯತೆ ಇಲ್ಲದಿದ್ದರೆ ಏಕೆ ಘೋಷಣೆ ಮಾಡಿದ್ದೀರಿ? ಡಿಸೆಂಬರ್ 2ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ ಪರ ಬಿಜೆಪಿ-ಜೆಡಿಎಸ್ ಹೋರಾಟ ಬೆಂಗಳೂರು, ಆಶಾ...

bjp-jds-joint-protest-belagavi-session-price-rise-corruption-farmers-issues-r-ashoka-hd-kumaraswamy

ಬೆಲೆ ಏರಿಕೆ, ಭ್ರಷ್ಟಾಚಾರ, ರೈತರ ಸಮಸ್ಯೆಗಳ ವಿರುದ್ಧ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

by admin
November 26, 2026
0

ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಮೊದಲ ಮೂರು-ನಾಲ್ಕು ದಿನ ಮೀಸಲಿಡಲು ಆಗ್ರಹ 15 ದಿನಗಳ ಕಾಲ ಅಧಿವೇಶನ ನಡೆಸಲು ಒತ್ತಾಯ; ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ...

half-malayalam-action-thriller-movie-housefull-screening-iffi-goa-ranjith-sajeev-amala-paul

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ‘ಹಾಫ್’ ಚಿತ್ರಕ್ಕೆ ಭರ್ಜರಿ ಸ್ವಾಗತ: ಹೌಸ್‌ಫುಲ್ ಪ್ರದರ್ಶನ ಕಂಡ ಮಲಯಾಳಂ ಆಕ್ಷನ್ ಥ್ರಿಲ್ಲರ್

by admin
November 26, 2026
0

​ಪಣಜಿ: ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಆನ್ ಸಜೀವ್ ಮತ್ತು ಪಿ.ಕೆ. ಸಜೀವ್ ನಿರ್ಮಿಸಿರುವ ಬಹುನಿರೀಕ್ಷಿತ ಮಲಯಾಳಂ ಆಕ್ಷನ್ ಥ್ರಿಲ್ಲರ್ ಚಿತ್ರ ‘ಹಾಫ್’ (HALF),...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram