ದಕ್ಷಿಣ ಕನ್ನಡದಲ್ಲಿ ಇಂದೂ ಸಹ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಒಂದೇ ದಿನ ಹೊಸದಾಗಿ ಐಎಲ್ಐ- 45 ಮಂದಿಗೆ, ಎಸ್ಎಆರ್ಐ -16 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಇನ್ನೂ ಸಂಪರ್ಕವೇ ಪತ್ತೆಯಾಗದ 15 ಮಂದಿಗೆ ಮಹಾಮಾರಿ ಒಕ್ಕರಿಸಿದ್ದು, ಪ್ರಾಥಮಿಕ ಸಂಪರ್ಕ ಹೊಂದಿದ್ದ 11 ಮಂದಿಗೆ ಪಾಸಿಟಿವ್ ಇರುವುದು ಧೃಡಪಟ್ಟಿದೆ. ವಿದೇಶದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೆಮ್ಮಾರಿಗೆ ಒಂದೇ ದಿನ 5 ಮಂದಿ ಬಲಿಯಾಗಿದ್ದಾರೆ. ಒಂದು ವಾರದ ಬಳಿಕ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿದಿರುವುದು ಸದ್ಯ ಸಮಾಧಾನಕರ ಸಂಗತಿಯಾಗಿದೆ. ದಿನೇ ದಿನೇ ದಕ್ಷಿಣ ಕನ್ನಡ ಭಾಗದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಪರಿಣಾಮ ಬೆಂಗಳೂರಿನ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯನ್ನು 23ನೇ ತಾರೀಕಿನ ವರೆಗೂ ಲಾಕ್ ಡೌನ್ ಮಾಡಲಾಗಿದೆ. ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








