ನವದೆಹಲಿ : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ 40 ಕೆಜಿ ಬೆಳ್ಳಿ ಇಟ್ಟಿಗೆಯನ್ನು ಇಟ್ಟು ಮೋದಿ ಶಿಲಾನ್ಯಾಸ ಮಾಡಲಿದ್ದಾರೆ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಹೆಮ್ಮಾರಿ ಕೊರೊನಾ ಕಾರಣದಿಂದಾಗಿ ತಡವಾಗಿದ್ದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಮೂಲಗಳ ಪ್ರಕಾರ ಆಗಸ್ಟ್ 3ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ತಿಳಿದು ಬಂದಿದೆ. ಕೊರೊನಾ ಕಾರಣದಿಂದ ಅತಿಥಿಗಳ ಪಟ್ಟಿಯನ್ನು ಕಡಿಮೆ ಮಾಡಲಾಗಿದ್ದು, ಅಯೋಧ್ಯೆಯ ವಿವಿಧ ಭಾಗಗಳಲ್ಲಿ ಭಕ್ತರು ಕಾರ್ಯಕ್ರಮ ವೀಕ್ಷಿಸಲು ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿದೆ.








