ಉಡುಪಿ: ಅಷ್ಟಮಠಗಳಲ್ಲಿ ಒಂದಾಗಿರುವ ಉಡುಪಿಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಶ್ರೀಗಳಿಗೆ ಕೊರೊನಾದ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಮಣಿಪಾಲ ಕೆಎಂಸಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭ ಕೋವಿಡ್ 19 ಟೆಸ್ಟಿಂಗ್ ನಡೆಸಿದಾಗ ಸೋಂಕಿರುವುದು ದೃಢಪಟ್ಟಿದೆ. ಅವರಿಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪುತ್ತಿಗೆ ಮಠದ ಆಪ್ತರು ಮಾಹಿತಿ ಕೊಟ್ಟಿದ್ದಾರೆ.
ಸದ್ಯ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ರೋಗದ ಯಾವುದೇ ಲಕ್ಷಣಗಳು ಇಲ್ಲ ಸ್ವಾಮೀಜಿ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ವಾಮೀಜಿಯ ಜೊತೆಗಿದ್ದವರನ್ನು, ಆಪ್ತರನ್ನು ಕ್ವಾರಂಟೈನ್ ಮಾಡಲು ಉಡುಪಿ ಜಿಲ್ಲಾ ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.








