ಬೆಂಗಳೂರು: ಕುಟುಂಬದವರಿಗೆ ಕೊರೊನಾ ಸೋಂಕು ಹರಡಿರುವ ವಿಚಾರವಾಗಿ ಸ್ಥಳೀಯರ ನಿಂದನೆಗೆ ಬೇಸತ್ತ ವ್ಯಕ್ತಿಯೊಬ್ಬರು ಹೆಸರುಘಟ್ಟ ಕೆರೆ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದ ಕಾಸಬಾಗಲು ನಿವಾಸಿಯಾದ 55 ವರ್ಷದ ನಾಗರಾಜು ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ನಾಗರಾಜು ಅವರ ಪುತ್ರನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಗನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಗನ ಆರೈಕೆ ಮಾಡಲು ನಾಗರಾಜು ಅವರ ಪತ್ನಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆಸಿಕೊಳ್ಳಲು ನಾಗರಾಜ್ ನಿರ್ಧರಿಸಿದ್ದರು.
ಆದರೆ, ನಾಗರಾಜು ತಮ್ಮ ಪತ್ನಿಯನ್ನು ಮನೆಗೆ ಕರೆಸಿಕೊಳ್ಳಲು ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಗ್ರಾಮದ ಮುಖಂಡನೊಬ್ಬನ ಸಹಕಾರ ಪಡೆದು ಪತ್ನಿಯನ್ನು ಮನೆಗೆ ಕರೆಸಿಕೊಂಡಿದ್ದ. ಆದರೆ, ಪತ್ನಿ ಮನೆಗೆ ಬಂದ ನಾಲ್ಕೇ ದಿನದಲ್ಲಿ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು.
ಈ ಹಿನ್ನೆಲೆಯಲ್ಲಿ ಕಾಸವಾಗಲು ಗ್ರಾಮದ ಜನರು ಹಾಗೂ ಊರಿನ ಮುಖಂಡ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದ ಹಿನ್ನೆಲೆಯಲ್ಲಿ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








