ಮಧ್ಯಪ್ರದೇಶದ ರಾಜ್ಯಪಾಲರಾದ ಲಾಲ್ ಜಿ ತಂಡನ್ ಅವರು ಇಂದು ಇಹಲೋಹ ತ್ಯಜಿಸಿದ್ದಾರೆ. ಅವರ ಪುತ್ರ ಆಶುತೋಶ್ ತಂಡನ್ ಅವರು ಅಧಿಕೃತವಾಗಿ ತಮ್ಮ ಟಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 85 ವರ್ಷದ ಲಾಲ್ ಜಿ ತಂಡನ್ ಅವರು ಇದೀಗ ವಿಧಿವಶರಾಗಿದ್ದು, ಹಲವಾರು ರಾಜಕೀಯ ಮುಖಂಡರು, ಗಣ್ಯರು, ಬಿಜೆಪಿ ನಾಯಕರು ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಟ್ವೀಟ್ ಮೂಲಕ ಲಾಲ್ ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ” ಶ್ರೀ ಲಾಲ್ ಜಿ ಅವರು ಯಾವಾಗಲು ಸ್ಮರಣೀಯ, ಸಾಮಾಜಕ್ಕೆ ದೇಶಕ್ಕೆ ಅವರ ನಿಸ್ವಾರ್ಥ ಸೇವೆ, ಅವರ ಶ್ರಮವನ್ನು ಯಾವಾಗಲೂ ದೇಶ ಸ್ಮರಿಸುತ್ತದೆ. ಉತ್ತರಪ್ರದೇಶದಲ್ಲಿ ಬಿಜೆಪಿಯನ್ನ ಪಲಪಡಿಸಲು ಮುಖ್ಯ ಪಾತ್ರ ನಿಭಾಯಿಸಿದ್ದು ಲಾಲ್ ಜಿ ತಂಡನ್ ಅವರು. ಸದಾ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಮಡು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ” ಎಂದು ಸಂತಾಪ ಸೂಚಿಸಿದ್ದಾರೆ.
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ
ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...








