ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ನಾಳೆಯಿಂದ ಲಾಕ್ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಜನತೆಯನ್ನುದ್ದೇಶಿಸಿ ಫೇಸ್ಬುಕ್ ಹಾಗೂ ಯೂಟ್ಯೂಬ್ ಮಾಧ್ಯಮಗಳ ಮೂಲಕ ನೇರ ಪ್ರಸಾರದಲ್ಲಿ ಮಾತನಾಡಿದ ಅವರು,
ಬೆಂಗಳೂರಿನಲ್ಲಿ ನಾಳೆಯಿಂದ ಲಾಕ್ಡೌನ್ ಇರಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದು ತಿಳಿಸಿದರು.
ಬೆಂಗಳೂರು ಮಾತ್ರವಲ್ಲ, ರಾಜ್ಯದ ಯಾವ ಭಾಗದಲ್ಲೂ ನಾಳೆಯಿಂದ ಲಾಕ್ಡೌನ್ ಇರುವುದಿಲ್ಲ. ಹೀಗಾಗಿ ಇನ್ನು ಮುಂದೆ ಲಾಕ್ಡೌನ್ ಬದಲಿಗೆ ಕಂಟೈನ್ಮೆಂಟ್ ಝೋನ್ಗಳಲ್ಲಿ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದರು.
ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಬಗ್ಗೆ ಮಾತನಾಡದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವತ್ತ ಗಮನ ಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಲಾಕ್ಡೌನ್ ಕೊರೊನಾ ತಡೆಗೆ ಪರಿಹಾರ ಅಲ್ಲ..
ಮಾಹಾಮಾರಿ ಕೊರೊನಾ ತಡೆಗೆ ಲಾಕ್ಡೌನ್ ಪರಿಹಾರ ಅಲ್ಲ. ಹೀಗಾಗಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೇ ಪರಿಹಾರ. ಹೀಗಾಗಿ ಪ್ರತಿಯೊಬ್ಬರು ಮನೆಯಿಂದ ಹೊರಗೆ ಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಮಾತ್ರ ಕೊರೊನಾ ಓಡಿಸಲು ಇರುವ ಮಾರ್ಗ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಲಾಕ್ಡೌನ್ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ಹೊಡೆತ ಬಿದ್ದಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡುವುದಿಲ್ಲ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸಿಕೊಳ್ಳಬೇಕಿದೆ. ಹೀಗಾಗಿ ಇನ್ನು ಮುಂದೆ ರಾಜ್ಯ ಜನತೆ ಎಂದಿನಂತೆ ತಮ್ಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದು ಭರವಸೆ ನೀಡಿದರು.
ಕೋವಿಡ್ ತಡೆಯಲು 5-ಟಿ ಸೂತ್ರ
ಕೊರೊನಾ ಹರಡುವುದನ್ನು ತಡೆಯಲು ತಜ್ಞರು ಕೊಟ್ಟ ಸಲಹೆ ಮೇರೆಗೆ 5-ಟಿ ಸೂತ್ರ ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಸಿಎಂ ಬಿಎಸ್ವೈ ತಿಳಿಸಿದ್ದಾರೆ.
ಪ್ರತಿ ಕೋವಿಡ್ ಸೋಂಕಿತರ ಸಂಪರ್ಕಿತ 48 ಮಂದಿಗೆ ಪರೀಕ್ಷೆ ಮಾಡಿದ್ದೇವೆ. ಇದು ದೇಶದಲ್ಲೇ ಮೊದಲ ಪ್ರಯತ್ನವಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ, ಚಿಕಿತ್ಸೆ ಗೊಂದಲಕ್ಕೆ ಬಗೆಹರಿದಿದೆ. ಸೋಂಕಿತರಲ್ಲಿ ಶೇ.80ರಷಗ್ಟು ಮಂದಿಗೆ ಸೋಂಕಿನ ಲಕ್ಷಣ ಇಲ್ಲ.
ಸೋಂಕಿತರಲ್ಲಿ ಶೇ.5ರಷ್ಟು ಮಂದಿಗೆ ಮಾತ್ರ ಐಸಿಯು, ವೆಂಟಿಲೇಟರ್ಗಳ ಅಗತ್ಯವಿದೆ.
ಕೊರೊನಾ ಚಿಕಿತ್ಸೆಗೆಂದು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿಂದಂತೆ ರಾಜ್ಯಾದಂಂತ 11 ಸಾವಿರ ಬೆಡ್ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಹೀಗಾಗಿ ಜನರು ಆತಂಕಪಡುವುದು ಬೇಡ. ಯಾವ ಕೊರೊನಾ ಸೋಂಕಿತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸೋಂಕು ಹೊಂದಿದವರು ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆಯಂತಹ ಪ್ರಯತ್ನ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.
24 ಗಂಟೆಗಳಲ್ಲೇ ಟೆಸ್ಟ್ ರಿಪೋರ್ಟ್
ಇನ್ನು ಮುಂದೆ ಕೊರೊನಾ ಟೆಸ್ಟ್ ಮಾಡಿದ 24 ಗಂಟೆಯೊಳಗೆ ವರದಿ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕೂ ಮೊದಲು ಟೆಸ್ಟ್ ವರದಿ ಬರಲು ವಿಳಂಬವಾಗುತ್ತಿತ್ತು. ಇನ್ನು ಮುಂದೆ ವಿಳಂಬ ಆಗುವುದಿಲ್ಲ. 24 ಗಂಟೆಗಲಲ್ಲಿ ವರದಿ ನೀಡಲು ಕ್ರಮಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳ ಗೊಂದಲ ಬಗೆಹರಿಸಲಾಗಿದೆ ಎಂದು ಸಿಎಮ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ದೆ.
ಹೊರರಾಜ್ಯದಿಂದ ಬಂದವರಿಂದ ಅಂದರೆ ಮಹಾರಾಷ್ಟರ, ತಮಿಳುನಾಡಿನಿಂದ ಬಂದವರಿಂದಾಗಿ ಬೆಂಗಳೂರಿನಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನ 8 ವಲಯಗಳಲ್ಲಿ ಒಬ್ಬ ಸಚಿವ ಹಾಗೂ ಅಧಿಕಾರಿಗಳ ನಿಯುಕ್ತಿ ಮಾಡಲಾಗಿದೆ. 8 ಸಾವಿರಕ್ಕೂ ಹೆಚ್ಚು ಬೂತ್ ಮಟ್ಟದ ಕಾರ್ಯಪಡೆಯನ್ನು ಕೊರೊನಾ ಹೋರಾಟಕ್ಕೆ ರಚಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಬಗ್ಗೆ ಮಾತನಾಡದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವತ್ತ ಗಮನ ಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಟೀಕೆ ಬೇಡ, ಸಲಹೆ ಕೊಡಿ
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನಡೆಸುತ್ತಿರುವ ಕಾರ್ಯಗಳ ಬಗ್ಗೆ ಅನಗತ್ಯ ಟೀಕೆ ಟಿಪ್ಪಣಿ ಮಾಡದೇ ರಚನಾತ್ಮಕ ಸಲಹೆಗಳನ್ನು ನೀಡುವಂತೆ ಪ್ರತಿಪಕ್ಷಗಳ ನಾಯಕರಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಒಟ್ಟಾಗಿ ಹೋಗೋಣ. ಅದಕ್ಕೆ ನಿಮ್ಮ ಸಹಕಾರ ಬೇಕು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಅಕ್ರಮವಾಗಿಲ್ಲ. ನೀವು ಯಾವುದೇ ಮಾಹಿತಿ ಕೇಳಿದರೂ ನಿಮಗೆ ಕೊಡುತ್ತೇವೆ. ಇದರಲ್ಲಿ ಒಂದು ರೂಪಾಯಿ ಅವ್ಯವಹಾರ ಆಗಿಲ್ಲ. ನಿಮಗೆ ಬೇಕಾದ ದಾಖಲೆ ಕೊಡಲು ಸಿದ್ದರಿದ್ದೇವೆ ಎಂದು ಬಿಎಸ್ವೈ ಸ್ಪಷ್ಟಪಡಿಸಿದರು.