ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು : ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಜಮಾಯಿಸಿದ ರೈತರು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ರೈತ ವಿರೋಧಿಯಾಗಿದೆ. ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು, ಇಲ್ಲವಾದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಇದೇ ವೇಳೆ ರಾಜ್ಯ ಪತ್ರ ಸುಟ್ಟು ಹಾಕಿ, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಕರಾಳ ಸ್ವತಂತ್ರ ದಿನಾಚರಣೆ ಆಚರಿಸುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ ಅನ್ನದಾತರು, ರಾಜ್ಯ ಸರ್ಕಾರ ತಾಂಡವಪುರ ಮತ್ತು ಹರಕನಹಳ್ಳಿ ಗ್ರಾಮದಲ್ಲಿ ಕೆಐಡಿಪಿನ ನೂರಾರು ಮನೆಗಳನ್ನು ಭೂಸ್ವಾಧೀನ ಮಾಡಲು ಹೊರಟಿದೆ ಎಂದು ಆರೋಪಿಸಿದರು.








