ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಬೆಂಗಳೂರು ನಗರ ಬಳಿಕ ಲಾಕ್‍ಡೌನ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯೂ ಕೂಡ ಗುರುವಾರದಿಂದ ಅನ್‍ಲಾಕ್ ಆಗಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆಯಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಲಾಕ್‍ಡೌನ್ ಇರುವುದಿಲ್ಲ ಎಂದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಗುರುವಾರದ ನಂತರ ಲಾಕ್‍ಡೌನ್ ತೆರವು ಮಾಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೊಂದು ವಾರ ಲಾಕ್‍ಡೌನ್ ಮುಂದುವರೆಸಲು ಜಿಲ್ಲಾಡಳಿತದ ಮಟ್ಟದಲ್ಲಿ ಚರ್ಚೆ ನಡೆಯುತ್ತಿತ್ತು. ಆದರೆ, ಕೊರೊನಾ ತಡೆಗೆ ಲಾಕ್‍ಡೌನ್ ಪರಿಹಾರ ಅಲ್ಲ ಎಂದು ಸಿಎಂ ಯಡಿಯೂರಪ್ಪ ಅವರೇ ಘೋಷಣೆ ಮಾಡಿದ ಹಿನ್ನೆಕೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಚಿಂತನೆಯನ್ನು ಕೈಬಿಡಲಾಗಿದೆ.
ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಚಟುವಟಿಕೆಗಳು ಪ್ರಾರಂಭವಾಗಲಿವೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಹೇರಲಾಗಿದ್ದ ಎಲ್ಲಾ ನಿರ್ಬಂಧಗಳು ತೆರವಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 149 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತ ಸಂಖ್ಯೆ 3829ಕ್ಕೆ ಏರಿಕೆಯಗಿದೆ. ಇಂದು 5 ಮಂದಿ ಹೆಮ್ಮಾರಿಗೆ ಉಸಿರು ಚೆಲ್ಲಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 73ಕ್ಕೆ ಏರಿಕೆಯಗಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








