ಜನರಿಗಾಗಿ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ
ಬೆಂಗಳೂರು : ಗ್ರಾಮೀಣ ಪ್ರದೇಶದ ಜನರ ಆರೋಗ್ಯ ತಪಾಸಣೆಗಾಗಿ ರಾಜ್ಯ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ನ ಮೂರು ಜನರ ಪ್ರತಿನಿಧಿಗಳ ತಂಡ ಭೇಟಿ ನೀಡಲಿದೆ. ಇವರಿಗೆ ಪಕ್ಷದ ವತಿಯಿಂದ ಪಿಪಿಇ ಕಿಟ್, ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಸ್ಯಾನಿಟೈಸರ್ ಅನ್ನು ನೀಡಲಾಗಿರುತ್ತೆ. ಇವರು ಪ್ರತಿ ಹಳ್ಳಿಯಲ್ಲಿ ಜನರ ದೇಹದ ಉಷ್ಣತೆ, ಅವರಲ್ಲಿ ಆಕ್ಸಿಜನ್ ಪ್ರಮಾಣ ಪರೀಕ್ಷಿಸುತ್ತಾರೆ. ಒಂದು ವೇಳೆ ಉಷ್ಣತೆ ಅಥವಾ ಆಕ್ಸಿಜನ್ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೆ, ಕಾಂಗ್ರೆಸ್ ವೈದ್ಯ ಘಟಕದ ವೈದ್ಯರ ಜತೆ ಚರ್ಚಿಸಿ ಅವರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡುತ್ತಾರೆ. ತೀರಾ ಅಗತ್ಯವೆನಿಸಿದರೆ ಅವರಿಗೆ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲು ಸಲಹೆ ನೀಡುತ್ತಾರೆ.








