ಕೊರೊನಾ ಆತಂಕದಲ್ಲಿ ಬದುಕುತ್ತಿರುವ ಜನರಲ್ಲಿ ಧೈರ್ಯ ತುಂಬುವ ಕೆಲಸವನ್ನು ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ. ಸ್ಥಳೀಯ ನಾಯಕರು ಪ್ರತಿ ಮನೆಮನೆಗೆ ತೆರಳಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದ್ದಾರೆ. ಕೊರೊನಾ ಸೋಂಕಿನಿಂದ ಆತಂಕಕ್ಕೆ ಒಳಗಾಗದೇ ಧೈರ್ಯವಾಗಿರುವಂತೆ ಅರಿವು ಮೂಡಿಸಬೇಕಿದೆ. ಇಡೀ ವಿಶ್ವಕ್ಕೆ ಕಂಟಕವಾಗಿರುವ ಈ ಸೋಂಕು ವ್ಯಾಪಕವಾಗಿ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ಜೆಡಿಎಸ್ –ಕಾಂಗ್ರೆಸ್ ಮೈತ್ರಿ ಸರ್ಕಾರದ ಕುರಿತಾಗಿ ಮಾತನಾಡಿದ ಹೆಚ್ ಡಿಕೆ ಕಾಂಗ್ರೆಸ್ ಜೊತೆ ಮೈತ್ರಿಗೆ ಜೆಡಿಎಸ್ ಎಂದೂ ಮುಂದಾಗಿರಲಿಲ್ಲ. ಮುಂದೆಯೂ ಕೂಡ ನಾವು ಮೈತ್ರಿಗೆ ಯೋಚಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ
ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...








