ರಾಜ್ಯದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲೂ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಇನ್ನಿತರೇ ಎಲ್ಲಾ ಸೇವೆಗಳಿಗೂ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲಾನ್ ಕಾಮಗಾರಿಗಳ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು ಧಾರ್ಮಿಕ ಕ್ಷೇತ್ರಗಳಲ್ಲಿ ದೇವರಿಗೆ ವಿವಿಧ ರೀತಿಯ ಸೇವೆಗಳನ್ನು ನೀಡಬೇಕೆಂಬ ಇಚ್ಛೆ ಎಲ್ಲಾ ಭಕ್ತರಲ್ಲೂ ಇದೆ. ಆದರೆ, ಕೊರೋನಾ ಬಿಕ್ಕಟ್ಟಿನಿಂದಾಗಿ ಅನಿವಾರ್ಯವಾಗಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಕ್ಷೇತ್ರಗಳಲ್ಲಿ ಸೇವಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...








