ಹಾವೇರಿ: ರೈತಪರ ಕಾಳಜಿ ಹೊಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಆದರೆ ಬಿ.ಸಿ.ಪಾಟೀಲರ ಅಭಿವೃದ್ಧಿ ಚಿಂತನೆಗಳನ್ನು ಸಹಿಸದ ಕಾಂಗ್ರೆಸ್ ತಾಲೂಕಿನ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಹಿರೇಕೆರೂರು ಬಿಜೆಪಿ ಜಿಲ್ಲಾ ದೊಡ್ಡಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನಲ್ಲಿ ಅಭಿವೃದ್ಧಿಯನ್ನು ಸಹಿಸದ ಬ್ಲಾಕ್ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುವುದರ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವುದು ಖಂಡನೀಯ.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಲಾಕ್‍ಡೌನ್‍ನಿಂದ ವಿನಾಯಿತಿಯೂ ನೀಡಲಾಗಿತ್ತು. ರಾಜ್ಯದ 30 ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಯಾವುದೇ ಕೊರತೆ ಎದುರಾಗದಂತೆ ನೋಡಿಕೊಂಡಿದ್ದಾರೆ ಎಂದರು.
ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಕೀಳುಮಟ್ಟದ ಯೋಚನೆಯಿಂದಾಗಿ ಕಾಂಗ್ರೆಸ್‍ಗೆ ಈ ಸ್ಥಿತಿ ಬಂದಿದೆ. ಇಲ್ಲಸಲ್ಲದ ಹೇಳಿಕೆ ನೀಡಿ ಅಭಿವೃದ್ಧಿಗೆ ಕುಂಠಿತ ಮಾಡುವುದಲ್ಲ ಎಂದು ದೊಡ್ಡಗೌಡರು ಕಿಡಿಕಾರಿದರು.
ಚಟ್ಟನಹಳ್ಳಿಯಿಂದ ಶಿಕಾರಿಪುರಕ್ಕೆ ಕೈಗೊಂಡಿರುವ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಕಾಂಗ್ರೆಸ್‍ನ ಆರೋಪ ನಿರಾಧಾರ. ಈ ಯೋಜನೆಯಿಂದ ಶಿಕಾರಿಪುರ ತಾಲೂಕಿಗಷ್ಟೇ ಅಲ್ಲದೇ ಹಿರೇಕೆರೂರಿಗೂ ಅನುಕೂಲವಾಗಲಿದೆ.
ಹಿರೇಕೆರೂರು ತಾಲೂಕಿನಲ್ಲಾಗಲೀ ಅಥವಾ ಹಾವೇರಿ ಜಿಲ್ಲೆಯಲ್ಲಾಗಲಿ ಯೂರಿಯಾ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗಿಲ್ಲ. ರೈತರ ಬೇಡಿಕೆಗಳನ್ನು ಪೂರೈಸಲು ಕೃಷಿ ಸಚಿವರು ಬದ್ಧವಾಗಿದ್ದಾರೆ ಎಂದು ದೊಡ್ಡಗೌಡ ಕೈ ನಾಯಕರ ವಿರುದ್ಧ ಆರೋಪಿಸಿದ್ದಾರೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








