ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈದ್ಯಕೀಯ ಉಪಕರಣಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನು ಕೆಲವೇ ಕ್ಷಣಗಳಳಲ್ಲಿ ದಾಖಲೆ ಬಹಿರಂಗ ಮಾಡುವ ಸಾಧ್ಯತೆ ಇದೆ.
ಕೊರೊನಾ ಮೆಡಿಕಲ್ ಕಿಟ್ ಖರೀದಿಯಲ್ಲಿ 2200 ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ಸಿದ್ದರಾಮಯ್ಯ ಅವರಿಗೆ ಆರೋಗ್ಯ ಸಚಿವ ಶ್ರೀರಾಮುಲು ಲೆಕ್ಕ ಕೊಟ್ಟಿದ್ದರು.
ಆದರೆ, ಸರ್ಕಾರ ಕೊಟ್ಟ ಲೆಕ್ಕ ವಾಸ್ತವಾಂಶಗಳಿಂದ ಕೂಡಿಲ್ಲ. ಹೀಗಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜತೆಗೂಡಿ ದಾಖಲೆ ಬಹಿರಂಗ ಮಾಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದರು.
ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ಆರಂಭವಾಗಲಿದೆ. ನಿಜವಾಗಿಯೂ ಸಿದ್ದರಾಮಯ್ಯ ಅವರ ಬಳಿ ಕೊರೊನಾ ಮೆಡಿಕಲ್ ಉಪಕರಣ ಖರೀದಿಗೆ ಸಂಬಂಧಿಸಿದ ಅಕ್ರಮದ ಬಗ್ಗೆ ದಾಖಲೆಗಳು ಇವೆಯಾ, ಸರ್ಕಾರ ನೀಡಿದ ಲೆಕ್ಕಕ್ಕೂ ಸಿದ್ದರಾಮಯ್ಯ ಹೇಳುವ ಲೆಕ್ಕಕ್ಕೂ ವೆತ್ಯಾಸ ಇರುತ್ತಾ. ಮೆಡಿಕಲ್ ಉಪಕರಣ ಖರೀದಿಯಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ನಡೆದಿದೆಯಾ, ಸರ್ಕಾರ ಕೆಲ ಸತ್ಯಗಳನ್ನು ಮುಚ್ಚಿಟ್ಟಿದೆಯಾ ಎಂಬುದಕ್ಕೆ ಸಿದ್ದರಾಮಯ್ಯ ಅವರ ಸುದ್ದಿಗೋಷ್ಠಿ ಭಾರೀ ಮಹತ್ವ ಪಡೆದುಕೊಂಡಿದೆ.
ಆರೋಗ್ಯ ಸಚಿವ ಶ್ರೀರಾಮುಲು ಉಪಕರಣ ಖರೀದಿಯಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ಆಗಿಲ್ಲ. ಎಲ್ಲಾ ದಾಖಲೆಗಳನ್ನು ಸಿದ್ದರಾಮಯ್ಯ ಅವರಿಗೆ ಕೊಡುತ್ತೇವೆ. ಬಂದು ನೋಡಿಕೊಳ್ಳಲಿ. ಸಿದ್ದರಾಮಯ್ಯ ಅವರ ಆರೋಪ ಆಕಾಶಕ್ಕೂ-ಭೂಮಿಗೂ ನಡುವಿನ ವೆತ್ಯಾಸದಂತಿದೆ. ಅಕ್ರಮ ಸಾಬೀತಾದರೆ ಒಂದು ಕ್ಷಣವೂ ಸಚಿವ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಸವಾಲು ಹಾಕಿದ್ದರು.
`ಲೆಕ್ಕ ಕೊಡಿ ಸರ್ಕಾರ’ ಎಂದು ಕಾಂಗ್ರೆಸ್ ಆರಂಭಿಸಿದ್ದ ಅಭಿಯಾನಕ್ಕೆ ಶ್ರೀರಾಮುಲು ಅವರು ನೀಡಿದ ಲೆಕ್ಕಕ್ಕೆ ಸಿದ್ದರಾಮಯ್ಯ ಅವರ ಪ್ರತ್ಯುತ್ತರ ಹೇಗಿರಲಿದೆ ಎಂಬುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
12 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ
ಚಾಮರಾಜನಗರ: ಹೊಲದಲ್ಲಿ ಬೆಳೆದಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಂಜಾ ಬೆಳೆದಿದ್ದ ಹೊಲದ ಮೇಲೆ ದಾಳಿ ನಡೆಸಿರುವ ಪೊಲೀಸರು 12 ಲಕ್ಷ ರೂ. ಮೌಲ್ಯದ...