ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳು ಜೀವ ಬೆದರಿಕೆ ಒಡ್ಡುತ್ತಿದ್ದಾರೆಂದು ಆರೋಪಿಸಿ, ವಂದೇ ಮಾತರಂ ಸಮಾಜ ಸಂಸ್ಥೆಯ ಅಧ್ಯಕ್ಷ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ರಮ್ಮಿ ಆಡಿ ಆಟ ಗೆಲ್ಲಿ ಎಂಬ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸುದೀಪ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಿ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ನಾಯ್ಕ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ದೂರಿನ ಬಳಿಕ ನನಗೀಗ ಸಾಕಷ್ಟು ಬೆದರಿಕೆ ಕರೆ ಮತ್ತು ಸಂದೇಶಗಳು ಬರುತ್ತಿವೆ. ಆಸ್ಟ್ರೇಲಿಯಾ, ಥಾಯ್ಲೆಂಡ್ ಹಾಗೂ ಸಿಂಗಾಪುರ ಸೇರಿದಂತೆ ವಿದೇಶದಿದಂಲೂ ಕೊಲೆ ಬೆದರಿಕೆ ಬರುತ್ತಿವೆ ಎಂದು ಪೊಲೀಸ್ ಆಯುಕ್ತರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ.
ಇದಲ್ಲದೆ ನನ್ನ ಪ್ರಾಣಕ್ಕೆ ಕುತ್ತು ಬಂದರೆ ಸುದೀಪ್ ಕಾರಣ. ತಕ್ಷಣ ನಟ ಸುದೀಪ್ ತಮ್ಮ ಅಭಿಮಾನಿಗಳಿಗೆ ತಿಳಿ ಹೇಳಬೇಕು. ಇದನ್ನು ನಿರ್ಲಕ್ಷ್ಯ ಮಾಡಿದ್ದಲ್ಲಿ ನಟ ಸುದೀಪ್ ಅವರ ಮನೆಯ ಮುಂದೆ ಧರಣಿ ಮಾಡುವುದಾಗಿ ಶಿವಕುಮಾರ್ ನಾಯ್ಕ್ ಎಚ್ಚರಿಕೆ ನೀಡಿದ್ದಾರೆ.
ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ
ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...








