ಮೈಸೂರು : ಸಿಎಂ ಬಿ.ಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವ ನಾಯಕ ಹಾಗೂ ಮಾತಿಗೆ ತಪ್ಪದ ಮಗ ಎಂಬುದನ್ನು ಉಳಿಸಿಕೊಂಡಿದ್ದಾರೆ. ಅವರು ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಬುಧವಾರ ಮಾತನಾಡಿದ ಅವರು, ಮುಖ್ಯಮಂತ್ರಿಗಳು ವಿಧಾನ ಪರಿಷತ್ ಗೆ 5 ಜನರನ್ನು ನಾಮ ನಿರ್ದೇಶನ ಮಾಡಿ ರಾಜ್ಯಪಾಲರು ಅಂಕಿತ ಹಾಕಿದ್ದು, ಇದು ಸಂತೋಷ ತಂದಿದೆ. ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಿದ್ದಾರೆ. ಮತ್ತೊಮ್ಮೆ ಯಡಿಯೂರಪ್ಪನವರು ನಾಲಿಗೆ ಮೇಲೆ ನಿಂತ ನಾಯಕ. ಅಲ್ಲದೆ ಮಾತಿಗೆ ತಪ್ಪದ ಮಗ ಎಂಬ ಮಾತನ್ನು ಸಹ ಉಳಿಸಿಕೊಂಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಬರೆದಿದ್ದಾರೆ ಎಂದು ಸಿಎಂ ಅವರನ್ನು ಹೊಗಳಿದರು.
ಇನ್ನು ನೂತನವಾಗಿ ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡಿರುವುದು ಸಂತಸ ತಂದಿದೆ. ನನಗೂ ಅವಕಾಶ ಕೊಟ್ಟಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಎಲ್ಲಾ ಸಚಿವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು ವಿಶ್ವನಾಥ್.








