ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾದಿಂದ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಯಾವುದೇ ತೊಂದರೆಯಾಗದು: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ

admin by admin
July 24, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

June 10, 2026
ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

June 10, 2026

ಕೊರೊನಾದಿಂದ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಯಾವುದೇ ತೊಂದರೆಯಾಗದು: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ
ಬೆಂಗಳೂರು,ಜು.24:ಈ ಬಾರಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಡ ಮುಂಗಾರು ಜಿಲ್ಲೆಗಳಲ್ಲಿ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರೆಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಕೊರೊನಾದಿಂದಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಕೊರತೆಯಾಗದಂತೆ ಸೂಕ್ತ ಕ್ರಮ ವಹಿಸಲಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚುವರಿಯಾಗಿ ಯೂರಿಯಾ ಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಲಾಗಿದೆಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
2020-21 ನೇ ಸಾಲಿನ ಮುಂಗಾರು ಹಂಗಾಮಿನ 2020 ಏಪ್ರಿಲ್ 1 ರಿಂದ ಜುಲೈ ಅಂತ್ಯದವರೆಗೆ ಒಟ್ಟು 13.99 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು ಇದರಲ್ಲಿ ಯೂರಿಯಾ 4.98 ಲಕ್ಷ ಡಿಎಪಿ 3.06 ಲಕ್ಷ ಮೆಟ್ರಿಕ್ ಟನ್ ಎಂಒಪಿ 1.37 ಲಕ್ಷ ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 4.58 ಲಕ್ಷ ಮೆಟ್ರಿಕ್ ಟನ್ ಗೆ ಬೇಡಿಕೆಯಿದೆ. ಈ ಪೈಕಿ ಜುಲೈ 23 ರವರೆಗೆ ಒಟ್ಟು 13.50 ಲಕ್ಷ ಮೆಟ್ರಿಕ್ ಟನ್ ಅಂದರೆ 5.36 ಮೆಟ್ರಿಕ್ ಟನ್ ಯೂರಿಯಾ ಡಿ ಎ ಪಿ- 2.49 ಲಕ್ಷ ಮೆ.ಟನ್ , ಎಂಒಪಿ . 1.03 ಲಕ್ಷ ಮೆ.ಟನ್ ಮತ್ತು ಕಾಂಪ್ಲೆಕ್ಸ್ , 4.62 ಲಕ್ಷ ಮೆ.ಟನ್ ಸರಬರಾಜಾಗಿರುತ್ತದೆ .ಕಳೆದ ಬಾರಿಗೆ ಹೋಲಿಸಿದರೆ ಶೇ.5.4 ರಷ್ಟು 13.50 ಲಕ್ಷ ಮೆಟನ್ ವಿವಿಧ ರಸಗೊಬ್ಬರಗಳು ಸರಬರಾಜಾಗಿರುತ್ತವೆ. ವಿಶೇಷವಾಗಿ 30.8%ರಷ್ಟು ಯೂರಿಯಾ ರಸಗೊಬ್ಬರ ಹೆಚ್ಚುವರಿ ಸರಬರಾಜಾಗಿರುತ್ತದೆ.
ಅದರಂತೆ ಮುಂಗಾರು ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಸಹ ಅಗತ್ಯಕ್ಕೆ ತಕ್ಕಂತೆ ಪೂರೈಸಲಾಗುತ್ತಿದ್ದು, ಯಾವುದೇ ಕೊರತೆಯಿರುವುದಿಲ್ಲ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, ರಾಜ್ಯದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಇದುವರೆಗೂ 3,29,862.8 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ. ಹಾಲಿ ರೈತ ಸಂಪರ್ಕ ಕೇಂದ್ರಗಳಲ್ಲಿ 52110 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದೆ. ರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ಬಿತ್ತನೆ ಬೀಜ ಹಾಗೂ ಯೂರಿಯಾ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗಿಲ್ಲ. ರೈತರ ಬೇಡಿಕೆಗಳನ್ನು ಪೂರೈಸಲು ಇಲಾಖೆ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ

Tags: Agriculture Minister BC PatilB C PatilbengaluruCoronaCOVID-19Farmerskarnatakamonsoon season
ShareTweetSendShare
Join us on:

Related Posts

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

by Shwetha
June 10, 2026
0

ರಾಜ್ಯ ಸಚಿವ ಸಂಪುಟ ರಚನೆಯಾಗಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಕರ್ನಾಟಕ ರಾಜಕಾರಣದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಪ್ರಮುಖವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ನಡುವಿನ ಜಟಾಪಟಿ...

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram