ಬೆಂಗಳೂರು: ರೈತರ ಸಾಲ ಮನ್ನಾ ವಿಚಾರವಾಗಿ ಕೆಲವು ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ‘ರೈತರ ಸಾಲ ಮನ್ನಾ’ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ರು. ಅದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸಿಎಂ ಬಿಎಸ್ ವೈ, ರೈತರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಸೂಕ್ತ ದಾಖಲೆ ಸಲ್ಲಿಸುವ ಎಲ್ಲ ರೈತರ ಸಾಲ ಮನ್ನಾ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಟ್ವೀಟ್ ಮೂಲಕ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








