ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಕಳೆದೆರೆಡು ದಿನಗಳಿಂದ ರಾಜಧರ್ಮದ ಬಗ್ಗೆ ಭಾರಿ ಚರ್ಚೆಗಳಾಗುತ್ತಿದೆ. ಬಿಜೆಪಿ ಸರ್ಕಾರ ರಾಜಧರ್ಮ ಪಾಲಿಸುತ್ತಿಲ್ಲ ಎಂದು ಕಾಂಗ್ರೆಸ್ ದೂಷಿಸಿದ್ದರೆ, ನಿಮ್ಮಿಂದ ನಾವು ರಾಜಧರ್ಮ ಕಲಿಯಬೇಕಾಗಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ಇದೀಗ ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಬಿಜೆಪಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜಧರ್ಮದ ಕುರಿತಾಗಿ ಟ್ವೀಟ್ ಮಾಡಿರುವ ಕಪಿಲ್ ಸಿಬಲ್, ‘ಕಾನೂನು ಸಚಿವರು ರಾಜಧರ್ಮವನ್ನು ನಮಗೆ ಭೋದಿಸಬೇಡಿ ಎಂದು ಹೇಳಿದ್ದಾರೆ. ನಾವು ಹೇಗೆ ಭೋದಿಸಲು ಸಾಧ್ಯ ಸಚಿವರೇ? ಗುಜರಾತ್‌ನಲ್ಲಿ ವಾಜಪೇಯಿ ಅವರ ಮಾತನ್ನೇ ಕೇಳದೇ ಇದ್ದವರು ನೀವು ನಮ್ಮ ಮಾತನ್ನು ಏಕೆ ಕೇಳುತ್ತೀರಿ?’ ಎಂದು ವ್ಯಂಗ್ಯವಾಡಿದ್ದಾರೆ.
ರಾಜಧರ್ಮವನ್ನು ಆಲಿಸುವುದು, ಕಲಿಯುವುದು ಮತ್ತು ಪರಿಪಾಲಿಸುವುದು ನಿಮ್ಮ ಸರ್ಕಾರದ ಬಲವಾದ ಅಂಶವೇ ಅಲ್ಲ! ಎಂದು ಸಿಬಲ್ ಕುಟುಕಿದ್ದಾರೆ.
ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್ನಲ್ಲಿ ಆರ್ಸಿಬಿ ವಾದ
ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...








