ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸುದೀರ್ಘ ಮೂರುವರೆ ದಶಕಗಳ ನಂತರ ಇತ್ಯರ್ಥಗೊಂಡ ರಾಜಸ್ಥಾನಿ ರಾಜಮನೆತನದ ಪ್ರಭಾವಿಯ ಹತ್ಯೆ ಪ್ರಕರಣ

admin by admin
July 25, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಸುದೀರ್ಘ ಮೂರುವರೆ ದಶಕಗಳ ನಂತರ ಇತ್ಯರ್ಥಗೊಂಡ ರಾಜಸ್ಥಾನಿ ರಾಜಮನೆತನದ ಪ್ರಭಾವಿಯ ಹತ್ಯೆ ಪ್ರಕರಣ:

ಮಥುರಾ, ಜುಲೈ 25: 1985ರಲ್ಲಿ ರಾಜಸ್ಥಾನದ ರಾಜಪ್ರಭುತ್ವದ ಪ್ರಭಾವಿ ನೇತಾರ, ಭರತ್‌ಪುರದ ಅಂದಿನ ಮುಖ್ಯಸ್ಥ ರಾಜಾ ಮನ್ ಸಿಂಗ್‌ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ ಸಿಂಗ್ ಭತಿ ಸೇರಿ ಹನ್ನೊಂದು ಪೊಲೀಸರು ಶಿಕ್ಷೆಗೊಳಗಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

1985 ರ ಫೆಬ್ರವರಿ 21 ರಂದು ನಡೆದ ಈ ಹತ್ಯೆ ರಾಜಸ್ಥಾನದಲ್ಲಿ ರಾಜಕೀಯ ಚಂಡಮಾರುತವನ್ನು ಸೃಷ್ಟಿಸಿತು ಮತ್ತು ಘಟನೆಯ ಎರಡು ದಿನಗಳ ನಂತರ ಕಾಂಗ್ರೆಸ್ ಮುಖ್ಯಮಂತ್ರಿ ಶಿವ ಚರಣ್ ಮಾಥುರ್ ಅವರ ರಾಜೀನಾಮೆಗೆ ಕಾರಣವಾಯಿತು. ಸಿನಿಮೀಯ ರೀತಿಯಲ್ಲೇ ಪೊಲೀಸರಿಂದ ಶರಣಾಗಲು ಬಂದ ರಾಜಾ ಮನ್ ಸಿಂಗ್‌ನನ್ನು ಕೊಲೆ ಮಾಡಲಾಯಿತು.

ಏನಿದು ಪ್ರಕರಣ :
1985 ರಲ್ಲಿ ರಾಜಸ್ಥಾನದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಡೀಗ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಏಳು ಬಾರಿ ಶಾಸಕರಾಗಿದ್ದ ರಾಜಾ ಮನ್ ಸಿಂಗ್ ವಿರುದ್ಧ ಕಾಂಗ್ರೆಸ್ ನಿವೃತ್ತ ಐಎಎಸ್ ಅಧಿಕಾರಿ ಬ್ರಿಜೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಿತು.

ಆದರೆ ಫೆಬ್ರವರಿ 20, 1985 ರಂದು ಕಾಂಗ್ರೆಸ್ ಕಾರ್ಯಕರ್ತರು ಭರತ್ ಪುರ ಸಂಸ್ಥಾನದ ಧ್ವಜವನ್ನು ಅವಮಾನಿಸಿದರು. ಇದರಿಂದ ಕೆರಳಿದ ರಾಜ ಮನ್ ಸಿಂಗ್ ತಮ್ಮ ಜೀಪ್ ಏರಿ ಮುಖ್ಯಮಂತ್ರಿಗಳ ರ್ಯಾಲಿಗೆಂದು ನಿರ್ಮಿಸಿದ್ದ ಸ್ಟೇಜ್ ಮತ್ತು ಪೆಂಡಾಲ್ ಛಿದ್ರಮಾಡಿದ್ದಲ್ಲದೆ ಮುಖ್ಯಮಂತ್ರಿಯ ಚುನಾವಣಾ ಪ್ರಚಾರಕ್ಕೆ ಬಳಸಿದ ಚಾಪರ್ ಅನ್ನು ಹಾನಿಗೊಳಿಸಿದ್ದರು.

ಮರುದಿನ, ಪ್ರಕರಣಕ್ಕೆ ಸಂಭದಿಸಿದಂತೆ ರಾಜಾ ಮನ್ ಸಿಂಗ್ ಮತ್ತು ಅವರ ಇಬ್ಬರು ಸಹಚರರು ಶರಣಾಗಲು ಸ್ಥಳೀಯ ಪೊಲೀಸ್ ಠಾಣೆಗೆ ಹೋಗುತ್ತಿದ್ದಾಗ, ಉಪ ಅಧೀಕ್ಷಕ ಕಾನ್ ಸಿಂಗ್ ಭತಿ ನೇತೃತ್ವದ ಪೊಲೀಸ್ ತಂಡವು ಗುಂಡು ಹಾರಿಸಿದ್ದರಿಂದ ರಾಜಾ ಮನ್ ಸಿಂಗ್ ಮತ್ತು ಅವರ ಸಹಚರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಾಜಾ ಮನ್ ಸಿಂಗ್ ಅವರ ಮೊಮ್ಮಗ ದುಶ್ಯಂತ್ ಸಿಂಗ್ ತನ್ನ ಹೇಳಿಕೆಯಲ್ಲಿ, ಹತ್ಯೆಗೆ ಕಾರಣವಾದ ಘಟನೆಗಳನ್ನು ವಿವರಿಸಿದ್ದಾರೆ.

ಮುಖ್ಯಮಂತ್ರಿ ರಾಜೀನಾಮೆ ಮತ್ತು ಸಿ ಬಿ ಐ ತನಿಖೆಗೆ:

ಘಟನೆಯಾದ ಎರಡು ದಿನಗಳ ನಂತರ ಆಗಿನ ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದ ಶಿವ ಚರಣ್ ಮಾಥುರ್, ರಾಜ ಮನ್ ಸಿಂಗ್ ಹತ್ಯೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ಮತ್ತು ಒಂದು ವಾರದ ನಂತರ ಅಂದರೆ ಫೆಬ್ರವರಿ 28 ರಂದು ಸಿಬಿಐ ವಿಚಾರಣೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸಾರ್ವಜನಿಕ ಅಧೀಕ್ಷಕರ ಮೇರೆಗೆ ಕೊಲೆ ಮಾಡಿದ ಪೊಲೀಸರನ್ನು ಮತ್ತು ಉಪ ಅಧೀಕ್ಷಕ ಕಾನ್ ಸಿಂಗ್ ಭತಿ ಅವರನ್ನು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಸೇವೆಯಿಂದ ವಜಾ ಮಾಡಲಾಯಿತು.

ಯಾರು ಈ ರಾಜಾ ಮನ್ ಸಿಂಗ್ :

ಗೌರವಾನ್ವಿತ ಸೇನಾ ಕರ್ನಲ್ ಆಗಿದ್ದ ಮಹಾರಾಜ ಬ್ರಜೇಂದ್ರ ಸಿಂಗ್ ಅವರ ನಾಲ್ಕು ಸಹೋದರರಲ್ಲಿ ರಾಜಾ ಮನ್ ಸಿಂಗ್ ಎರಡನೆಯವರಾಗಿದ್ದರು. 1929 ರಲ್ಲಿ ಅವರ ತಂದೆ ಮಹಾರಾಜ ಕಿಶನ್ ಸಿಂಗ್ ಅಧಿಕಾರ ವಹಿಸಿಕೊಂಡರು. ಅವರ ತಂದೆಯ ನಂತರ ಬ್ರಿಜೇಂದ್ರ ಸಿಂಗ್ ಭರತ್ ಪುರ ಕೋಟೆಯ ಪಾಲಕರಾದರು. ರಾಜಾ ಮನ್ ಸಿಂಗ್ ಅವರು ರಾಜ್ಯದ ಒತ್ತಡದಿಂದಾಗಿ ಸೇವೆಯನ್ನು ತೊರೆಯನ್ನು ತೊರೆಯುವ ಮೊದಲು ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಈ ಪ್ರಕರಣದ ವಿಚಾರಣೆಯನ್ನು ಮೊದಲು ರಾಜಸ್ಥಾನ ನ್ಯಾಯಾಲಯದಲ್ಲಿ ನಡೆಸಲಾಯಿತು. ಆದರೆ ಸುಪ್ರೀಂ ಕೋರ್ಟ್‌ನ ಸೂಚನೆಯ ಮೇರೆಗೆ ಮಥುರಾಕ್ಕೆ ವರ್ಗಾಯಿಸಲಾಯಿತು. ಒಟ್ಟು 1,700 ಕ್ಕೂ ಹೆಚ್ಚು ವಿಚಾರಣೆಗಳನ್ನು ನಡೆಸಲು ಸುಮಾರು 35 ವರ್ಷಗಳೇ ಬೇಕಾಯಿತು.

ನ್ಯಾಯಾಲಯದ ತೀರ್ಪು:

ಎರಡು ದಶಕಗಳ ಸುದೀರ್ಘ ತನಿಖೆಯ ನಂತರ ಇದೀಗ ರಾಜವಂಶಸ್ಥ ರಾಜಾ ಮನ್ ಸಿಂಗ್ ಕೊಲೆಗಡುಕ ಪೊಲೀಸರನ್ನು ಮತ್ತು ಉಪ ಅಧೀಕ್ಷಕ ಕಾನ್ ಸಿಂಗ್ ಭತಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಸ್ತುತ ರಾಜಸ್ತಾನ ಬಿಕ್ಕಟ್ಟಿನಲ್ಲಿ ರಾಜಾ ಮನ್ ಸಿಂಗ್ ಅವರ ಸೋದರಳಿಯ:

ಏತನ್ಮದ್ಯೆ ಪ್ರಸ್ತುತ ರಾಜಸ್ತಾನ ಬಿಕ್ಕಟ್ಟಿನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕಾರ್ಯವೈಖರಿ ಬಗ್ಗೆ ಬಂಡಾಯವೆದ್ದ ಸಚಿನ್ ಪೈಲಟ್ ಜೊತೆಗಿರುವ 18 ಶಾಸಕರಲ್ಲಿ ಒಬ್ಬರಾದ ವಿಶ್ವೇಂದ್ರ ಸಿಂಗ್, ಕೊಲೆಯಾದ ರಾಜಾ ಮನ್ ಸಿಂಗ್ ಅವರ ಸೋದರಳಿಯ.

ಅಶೋಕ್ ಗೆಹ್ಲೋಟ್ ವಿರುದ್ಧ ಬಿಜೆಪಿಯೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ವಿಶ್ವೇಂದ್ರ ಸಿಂಗ್ ಮತ್ತು ಇನ್ನೊಬ್ಬ ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸೋಮವಾರ ವಿಶ್ವೇಂದ್ರ ಸಿಂಗ್ ಅವರು ರಾಜ್ಯದ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅದೇನೆ ಇರಲಿ ಸುದೀರ್ಘ 35 ವರ್ಷಗಳ ಹಿಂದಿನ ರಾಜಮನೆತನದ ಹತ್ಯೆ ಕೊನೆಗೂ ಇತ್ಯರ್ಥಗೊಂಡು ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಮೂಲಕ ಅಂತ್ಯಕಂಡಿದೆ.

Tags: BJPCongresscourtKingLatestMurderpalacerajastan
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram