ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ನಾಳೆ ಸಂಡೇ ಲಾಕ್‍ಡೌನ್ ಮಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ನಿರ್ಧರಿಸಿದೆ.
ಈ ಹಿಂದಿನ ಲಾಕ್‍ಡೌನ್‍ಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇತ್ತು. ಆದರೆ, ನಾಳೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇಲ್ಲ. ಕೇವಲ ಆಸ್ಪತ್ರೆ, ಔಷಧಿ ಹಾಗೂ ಹಾಲು ಖರೀದಿಗೆ ಮಾತ್ರ ಅನುಮತಿ ನೀಡಲಾಗಿದೆ.
ಅಗತ್ಯ ವಸ್ತುಗಳ ಖರೀದಿ, ಮಾಂಸ-ಮೀನು ಖರೀದಿ ನೆಪದಲ್ಲಿ ಜನರು ರಸ್ತೆಗೆ ಬರುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರ ಓಡಾಟವನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ಜನರು ರಸ್ತೆಗೆ ಇಳಿಯುವ ಮುನ್ನ ಸಾಕಷ್ಟು ಯೋಚನೆ ಮಾಡಿ ಹೊರ ಬರಬೇಕಾಗಿದೆ.
ಇಡೀ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಆಗಲಿದ್ದು, ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಆಗಲಿದೆ. ಅಷ್ಟೇ ಅಲ್ಲದೆ ಜುಲೈ 31ರವರೆಗೆ ಪ್ರತಿ ದಿನ ರಾತ್ರಿ 9 ಗಂಟೆಯಿಂದ ಮಾರನೆಯ ದಿನ ಬೆಳಿಗ್ಗೆ 5 ಗಂಟೆವರೆಗೂ ನೈಟ್ ಕಫ್ರ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಸಂಡೇ ಲಾಕ್‍ಡೌನ್ ಮಾಡಲು ಈ ಕ್ರಮ ಕೈಗೊಂಡಿದೆ.
—————————————————————————————————————————————————————–
‘HALF CHITRANNA’ | KANNADA SHORT FILM 2020 | MANOJ P NADALUMANE, RITVIK MURALIDHAR.








