ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಕೆಲ ಸಚಿವರ ವಿರುದ್ಧ ಕೊರೊನಾ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲೆ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಭ್ರಷ್ಟಾಚಾರದ ಆರೋಪ ಮಾಡಿದವರ ಹಿನ್ನಲೆಯನ್ನು ಮೊದಲು ಗಮನಿಸಬೇಕು ಎಂದು ಪರೋಕ್ಷವಾಗಿ ಡಿಕೆಶಿಗೆ ಕುಟುಕಿದ್ದಾರೆ.
ಸರ್ಕಾರದ ಐವರು ಸಚಿವರು ಕೊರೊನಾ ಕಿಟ್ ಖರೀದಿ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳೂ ಕಾಂಗ್ರೆಸ್‍ನ್ನು ಚರ್ಚೆಗೆ ಅಹ್ವಾನಿಸಿದ್ದಾರೆ. ಹೀಗಿದ್ದರೂ ಭ್ರಷ್ಟಾಚಾರದ ಆರೋಪ ಮಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬೇಲ್ ನಲ್ಲಿದ್ದಾರೆ. ಮಾಜಿ ಅಧ್ಯಕ್ಷರೂ ಬೇಲ್ ಮೇಲೆ ಹೊರಗಡೆ ಇದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರೂ ಬೇಲ್‍ನಲ್ಲೇ ಇದ್ದಾರೆ. ಅವರ ಕೇಸ್‍ಗಳ ಹಿನ್ನಲೆ ಗಮನಿಸಿದ್ರೆ ಗೊತ್ತಾಗುತ್ತದೆ ಎಂದು ಸೋನಿಯಾಗಾಂಧಿ, ರಾಹುಲ್‍ಗಾಂಧಿ ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








