ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರು ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಶುಭಕೋರಿದರು.
ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಆಗಮಿಸಿದ ನಳೀನ್ ಕುಮಾರ್ ಕಟೀಲ್, ಹೂಗುಚ್ಛ ನೀಡಿ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಪಕ್ಷದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಸೇರಿದಂತೆ ಮತ್ತಿತರರು ಇದ್ದರು.
ಈ ವೇಳೆ ಉಭಯ ನಾಯಕರು ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.








