ಬಾಗಲಕೋಟೆ: ನಾಚಿಕೆ, ಮಾನ ಮರ್ಯಾದೆ ಇದ್ದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ಕೊಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಆಗ್ರಹಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆ ಹಾಗೂ 80ರ ದಶಕದ ಸಿಖ್ ಗಲಭೆಯ ನಂತರ ದೆಹಲಿಯಲ್ಲಿ ಅತಿ ದೊಡ್ಡ ಗಲಭೆ ನಡೆದಿದೆ. ಈ ವೇಳೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. “ನಾಚಿಕೆ, ಮಾನ ಮರ್ಯಾದೆ ಇದ್ದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣ ರಾಜೀನಾಮೆ ಕೊಡಬೇಕು”. ಇಲ್ಲದಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಕಿತ್ತು ಹಾಕಲಿ ಎಂದು ಒತ್ತಾಯಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಹಿರೇಮಠ ಅವರು, ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯನ್ನು ರಾತ್ರೋರಾತ್ರಿ ವರ್ಗಾವಣೆಗೊಳಿಸಿರುವುದು ನೋಡಿದರೆ 70ರ ದಶಕದ ಮಧ್ಯಭಾಗದ ತುರ್ತು ಪರಿಸ್ಥಿತಿ ಮತ್ತೆ ಜಾರಿಯಾಗಿರುವುದು ವೇದ್ಯವಾಗುತ್ತಿದೆ. ಇದರ ವಿರುದ್ಧ ದೇಶದಲ್ಲಿ ಎರಡನೇ ಸ್ವಾತಂತ್ರ‍್ಯ ಹೋರಾಟ ಆಗುವ ಎಲ್ಲ ಲಕ್ಷಣವೂ ಕಾಣುತ್ತಿದೆ ಎಂದರು.
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








