ಮೈಸೂರು: ರಾಜ್ಯದಲ್ಲಿ ರಣಕೇಕೆ ಮುಂದುವರೆಸಿರುವ ಮಹಾಮಾರಿ ಕೊರೊನಾ ಇಬ್ಬರು ವೈದ್ಯರನ್ನು ಬಲಿ ಪಡೆದುಕೊಂಡಿದೆ. ಮೈಸೂರು ಹಾಗೂ ಹಾಸನದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಇಬ್ಬರು ಖಾಸಗಿ ವೈದ್ಯರು ಕೊರಾನಾಗೆ ಬಲಿಯಾಗಿದ್ದಾರೆ.
ಮಂಡ್ಯದ ಕೆ.ಆರ್ ಪೇಟೆಯಲ್ಲಿ ಖಾಸಗಿ ಕ್ಲಿನಿಕ್ ಹೊಂದಿದ್ದ ಸುಮಾರು 70ರ ಹರೆಯದ ವೈದ್ಯರು ಕೊರೊನಾದಿಂದ ಮೃತಪಟ್ಟಿದ್ದಾರೆ.
ನಿನ್ನೆ ವೈದ್ಯರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ವೈದ್ಯರನ್ನು ದಾಖಲು ಮಾಡಲಾಗಿತ್ತು. ಇಂದು ಬೆಳಗಿನಜಾವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೈಸೂರಿನ ನಿವಾಸಿಯಾಗಿರುವ ವೈದ್ಯರು, ಪ್ರತಿದಿನ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಗೆ ಹೋಗಿ ಕ್ಲಿನಿಕ್ ನಡೆಸುತ್ತಿದ್ದರು. ವೈದ್ಯರು ಕೊರೊನಾದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಕ್ಲಿನಿಕ್ ಸಮೀಪದ ಮೆಡಿಕಲ್ ಸ್ಟೋರನ್ನು ಸೀಲ್‍ಡೌನ್ ಮಾಡಲಾಗಿದೆ.
ಇದೇ ವೇಳೆ, ಹಾಸನದಲ್ಲಿ ಖಾಸಗಿ ನರ್ಸಿಂಗ್ ಹೋಂ ನಡೆಸುತ್ತಿದ್ದ 75 ವರ್ಷದ ವೈದ್ಯರೊಬ್ಬರು ಮಾರಕ ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ವೈದ್ಯರಿಗೆ 15 ದಿನದ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ
ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...








